ಕೊಪ್ಪಳ: ನಿಯಂತ್ರಣ ತಪ್ಪಿ ಬೈಕ್ ಕಾಲುವೆಗೆ ಬಿದ್ದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ತಾಲೂಕಿನ ಸಾಣಾಪುರ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಒಡಿಶಾ (Odisha) ಮೂಲದ ಲುಲ್ಲು ಲಾಲ್ (30) ಎಂದು ಗುರುತಿಸಲಾಗಿದ್ದು, ಕೊಪ್ಪಳ ತಾಲೂಕಿನ ಮೆತಗಲ್ ಬಳಿ ವಿಂಡ್ ಪವರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು – ಭಾನುವಾರ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾವೇಶ
ಇಂದು (ಡಿ.7) ಬೆಳಿಗ್ಗೆ ಅಂಜನಾದ್ರಿಯ ಆಂಜನೇಯ ದರ್ಶನಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತ ಲುಲ್ಲು ಸೇರಿದಂತೆ ಇಬ್ಬರು ಬೆಟ್ಟಕ್ಕೆ ಹೊರಟಿದ್ದರು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿದೆ. ಬಿದ್ದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಹಾಗೂ ಹಿಂಬದಿ ಸವಾರನಿಗೆ ಗಾಯಗಳಾಗಿದ್ದು, ಆತನನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗಾವತಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೊದಲ ಗುರಿ: ಶೈಲೇಂದ್ರ ಬೆಲ್ದಾಳೆ