ಚಿಕ್ಕಮಗಳೂರು: ವೇಗವಾಗಿ ಬಂದ ಬೈಕ್ ವೃದ್ಧೆಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧೆ ಹಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಜಿಲ್ಲೆಯ ಕಳಸ ಸಮೀಪದ ಬಾಳೆಹೊಳೆ ಪಟ್ಟಣದಲ್ಲಿ ಈ ನಡೆದಿದೆ. ವೃದ್ಧೆ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ರಸ್ತೆ ದಾಟುವ ಆತುರದಲ್ಲಿದ್ದ ವೃದ್ಧೆ ಎದುರಿನಿಂದ ಬರುತ್ತಿದ್ದ ಬೈಕನ್ನು ಗಮನಿಸದೇ ಇರುವುದರಿಂದ ರಭಸದಿಂದ ಬಂದ ಬೈಕ್ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವೃದ್ಧೆ ಹಾರಿ ಬಿದ್ದಿದ್ದಾರೆ. ಈ ಅಪಘಾತದ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯಿಂದಾಗಿ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿವೆ. ಸದ್ಯ ಮೂವರು ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv