ಚಿಕ್ಕೋಡಿ: ಪತಿಯೊಂದಿಗೆ ದೇವರ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಬೈಕ್‌ಗೆ ಲಾರಿ ಡಿಕ್ಕಿಯೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ತಾಲೂಕಿನ ಮಜಲಟ್ಟಿ ಕ್ರಾಸ್ ಬಳಿ ನಡೆದಿದೆ.
ಮೃತ ಮಹಿಳೆಯನ್ನು (Women) ಹುಕ್ಕೇರಿ ತಾಲೂಕಿನ ಕೋಚರಿ ಗ್ರಾಮದ ರೇವತಿ ಬಸಗೌಡ ಅರಳಿಕಟ್ಟಿ (25), ಗಾಯಾಳು ಪತಿ ಬಸಗೌಡ ಶಿವಲಿಂಗ ಅರಳಿಕಟ್ಟಿ (35) ಎಂದು ಗುರುತಿಸಲಾಗಿದೆ. ಪತಿ-ಪತ್ನಿ ಇಬ್ಬರೂ ಚಿಕ್ಕೋಡಿ ತಾಲೂಕಿನ ಯಡೂರಿಗೆ ದೇವರ ದರ್ಶನಕ್ಕೆ ತೆರಳಿದ್ದರು. ಇದನ್ನೂ ಓದಿ: ಮಣಿಪುರದಲ್ಲಿ ಸಿಎಂ ಬೆಂಗಾವಲು ಪಡೆ ಮೇಲೆ ಬಂಡುಕೋರರಿಂದ ಗುಂಡಿನ ದಾಳಿ!
- Advertisement -
- Advertisement -
KA23 EI-8338 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಮಜಲಟ್ಟಿ ಕ್ರಾಸ್ ಬಳಿ ಎದುರಿಗೆ ಬರುತ್ತಿದ್ದ KA32 B 7422 ಲಾರಿ ಡಿಕ್ಕಿ ಹೊಡೆದಿದೆ, ಪರಿಣಾಮ ವಿವಾಹಿತ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತಿ ಬಸಗೌಡ ಶಿವಲಿಂಗ ಅರಳಿಕಟ್ಟಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -
ಅಪಘಾತದ ಬಳಿಕ ಲಾರಿ ಚಾಲಕ (Lorry Driver) ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಬಳಿಕ ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಕಡದೇವರ, ಪಿಎಸ್‌ಐ ಸಚಿನ್ ದಾಸರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ (Chikkodi Police Station) ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಟ್ಟಿಂಗ್ ಭೂತಕ್ಕೆ ಕಾಂಗ್ರೆಸ್ ಕಾರ್ಯಕರ್ತ ಬಲಿ – ಲಾಡ್ಜ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ!