ಬೈಕ್‍ಗಳ ನಡುವೆ ಡಿಕ್ಕಿ – ಲಾರಿಯಡಿ ಸಿಲುಕಿ ಸವಾರ ಸ್ಥಳದಲ್ಲೇ ಸಾವು

Public TV
1 Min Read
BIKE ACCIDENT

ಬೆಂಗಳೂರು: ಯೂಟರ್ನ್ ಮಾಡುವಾಗ ಬೈಕ್‍ಗೆ ಹಿಂದಿನಿಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಬೈಕ್ ಸವಾರ ಸಿಲುಕಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕ, ತಮಿಳುನಾಡು ಗಡಿಯಲ್ಲಿ ನಡೆದಿದೆ.

BIKE ACCIDENT 1

ಹೊಸೂರು ತಳಿ ರಸ್ತೆಯಲ್ಲಿ ಬೈಕ್ ಸವಾರನೊಬ್ಬ ಯೂಟರ್ನ್ ಮಾಡುವಾಗ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಎದುರಿನ ರಸ್ತೆ ಮೇಲೆ ಬಿದ್ದಿದ್ದಾನೆ. ಈ ವೇಳೆ ಎದುರಿನಿಂದ ಬರುತ್ತಿದ್ದ ಲಾರಿ ಬೈಕ್ ಸವಾರನ ಮೇಲೆ ಹರಿದ ಪರಿಣಾಮ ಆತ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಇದನ್ನೂ ಓದಿ: ದಾಂಪತ್ಯಕ್ಕೆ ಅಂತ್ಯ ಹಾಡಿದ ಸಮಂತಾ, ನಾಗ ಚೈತನ್ಯ

BIKE ACCIDENT 2

ಮೃತನನ್ನು ಹೊಸೂರು ಟೌನ್ ನಿವಾಸಿ ತರುಣ್(19)ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳಕ್ಕೆ ಹೊಸೂರು ಟೌನ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಭಾರತದ 20 ಲಕ್ಷ ವಾಟ್ಸಪ್ ಖಾತೆಗಳು ಬ್ಯಾನ್

Share This Article
Leave a Comment

Leave a Reply

Your email address will not be published. Required fields are marked *