ಬೆಂಗಳೂರು: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್ ಪೇದೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಂದಿನಿ ಲೇಔಟ್ನಲ್ಲಿ ನಡೆದಿದೆ.
ಭಕ್ತರಾಮ್ ಮೃತ ಪೇದೆ. ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ ರಾತ್ರಿ ಭಕ್ತರಾಮ್ ಕೆಲಸ ಮುಗಿಸಿ ಮನೆಗೆ ಹೊರಟಿದ್ದರು. ಪೈಪ್ಲೈನ್ ರಸ್ತೆಯಲ್ಲಿ ಹೋಗುತ್ತಿರುವ ವೇಳೆ ಅದೇ ರಸ್ತೆಯಲ್ಲಿ ಬಂದ ಲಾರಿಯೊಂದು ವೇಗವಾಗಿ ಬಂದು ಡಿವೈಡರ್ಗೆ ಡಿಕ್ಕಿ ಹೊಡೆದಿತ್ತು.
Advertisement
ಡಿಕ್ಕಿಯ ರಭಸಕ್ಕೆ ಡಿವೈಡರ್ ಬಳಿಯಿಂದ ದೊಡ್ಡ ಗಾತ್ರದ ಕಲ್ಲುಗಳು ಸಿಡಿದಿವೆ. ಪರಿಣಾಮ ಭಕ್ತರಾಮ್ ಹಿಂದೆ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಡಿವೈಡರ್ಗೆ ಗುದ್ದಿದ್ದಾರೆ. ಪರಿಣಾಮ ಭಕ್ತರಾಮ್ಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣ ಅವರನ್ನು ಗೂರಗುಂಟೆ ಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
Advertisement
ಇಂದು ಚಿಕಿತ್ಸೆ ಫಲಕಾರಿಯಾಗದೆ ಪೇದೆ ಭಕ್ತರಾಮ್ ಮೃತಪಟ್ಟಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಯಶವಂತಪುರ ಸಂಚಾರಿ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.