ರಾಮನಗರ: ನಮೋ ಯುವ ಬ್ರಿಗೇಡ್ 2.0 ಬೈಕ್ ರ‍್ಯಾಲಿ ಹಿನ್ನೆಲೆ ಇಂದು (ಶುಕ್ರವಾರ) ರಾಮನಗರಕ್ಕೆ ಬೈಕ್ ರ‍್ಯಾಲಿ (Bike Rally) ಮೂಲಕ ಆಗಮಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಕರ್ನಾಟಕ ಬಂದ್‌ಗೆ (Karnataka Bandh) ಬೆಂಬಲ ವ್ಯಕ್ತಪಡಿಸಿದ್ದಾರೆ.
Advertisement
ಚನ್ನಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳ ಜೊತೆ ಪ್ರತಿಭಟನೆಯಲ್ಲಿ ಭಾಗಿಯಾದ ಸೂಲಿಬೆಲೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಚನ್ನಪಟ್ಟಣದ ಗಾಂಧಿ ವೃತ್ತದಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆಗಳ ಜೊತೆ ರಸ್ತೆಯಲ್ಲಿ ಕೂತು ಪ್ರತಿಭಟನೆಗೆ ಬೆಂಬಲ ನೀಡಿದರು.
Advertisement
Advertisement
ಇದೇ ವೇಳೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಕಾವೇರಿ ಹೋರಾಟಕ್ಕೆ ನಮೋ ಬ್ರಿಗೇಡ್ ಸಂಪೂರ್ಣ ಬೆಂಬಲ ನೀಡಿದೆ. ಇಂದು ಬೈಕ್ ರ‍್ಯಾಲಿ ಮೂಲಕ ಚನ್ನಪಟ್ಟಣ, ಮಂಡ್ಯ, ಚಾಮರಾಜನಗರದ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದೇನೆ. ಹೋರಾಟದಲ್ಲಿ ಭಾಗಿಯಾಗಿ ನೀರು ನಿಲ್ಲಿಸಬೇಕು ಎಂದು ಆಗ್ರಹ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿಯವರು ಕರ್ನಾಟಕವನ್ನ ಪಾಕಿಸ್ತಾನದಲ್ಲಿದೆ ಎಂದು ತಿಳಿದಿದ್ದಾರಾ: ಕಾಂಗ್ರೆಸ್ ಪ್ರಶ್ನೆ
Advertisement
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ದೃಢ ನಿಲುವು ಮಾಡಿಲ್ಲ. ಸಂಪೂರ್ಣವಾಗಿ ನೀರು ನಿಲ್ಲಿಸುವ ಕೆಲಸ ಮಾಡಿಲ್ಲ. ಸಿಎಂ, ಡಿಸಿಎಂ ಅವರ ಹೇಳಿಕೆ ಗಮನಿಸಿದ್ದೇನೆ. ಅವರ ವೈಯಕ್ತಿಕ ಹಿತಾಸಕ್ತಿಗೆ ರಾಜ್ಯದ ಜನರ ಹಿತಾಸಕ್ತಿ ಬಲಿಯಾಗುವ ಆತಂಕ ಇದೆ. ರಾಜ್ಯ ಸರ್ಕಾರ ನೀರು ಬಿಡಲ್ಲ ಎಂದಾಗ ತಮಿಳುನಾಡು ಸರ್ಕಾರ ನೀರು ಬೇಕು ಅಂತ ಹೋರಾಟ ಮಾಡಿದರೆ ಮಾತ್ರ ಕೇಂದ್ರ ಮಧ್ಯ ಪ್ರವೇಶ ಮಾಡಬಹುದು. ಆದರೆ ಅವರು ಕೇಳೋಕು ಮುಂಚೆಯೇ ನೀರು ಬಿಡುತ್ತಿದ್ದಾರೆ ಎಂದರು.
ಇಂಡಿಯಾ ಒಕ್ಕೂಟವನ್ನು ಓಲೈಸಲು ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಚಕ್ರವರ್ತಿ ಸೂಲಿಬೆಲೆ ಕಿಡಿಕಾರಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಂದ್ ಬಿಸಿ – 60 ವಿಮಾನ ರದ್ದು
Web Stories