ಚಿಕ್ಕಮಗಳೂರು: ಆಡಿ ಕಾರು (Audi Car) ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ (Chikkamagaluru) ನಡೆದಿದೆ.
ತಾಲೂಕಿನ ಹಿರೇಗೌಜ (Hiregowja) ಗೇಟ್ ಬಳಿ ಈ ಘಟನೆ ನಡೆದಿದ್ದು, ಮೃತನನ್ನು 28 ವರ್ಷದ ದರ್ಶನ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ದರ್ಶನ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಶಶಿಕುಮಾರ್ ಎಂಬವರಿಗೆ ತೀವ್ರ ಗಾಯಗಳಾಗಿದ್ದರಿಂದ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಭೀಕರ ಅಪಘಾತದಿಂದ ಬೈಕಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತವಾದ ಕೂಡಲೇ ಕಾರು ಚಾಲಕ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್ ವೇಯಲ್ಲಿ ಭೀಕರ ಅಪಘಾತ ; ಮೂವರು ಯುವಕರು ಸಾವು
ಅಪಘಾತಕ್ಕೆ ಕಾರು ಚಾಲಕನ ವೇಗವೇ ಕಾರಣ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಈ ಕುರಿತು ಸಖರಾಯ ಪಟ್ಟಣ ಪೊಲೀಸರು ಸ್ಥಳ ಪರೀಶಿಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಾನಸಿಕ ಖಿನ್ನತೆಯಿಂದಾಗಿ ನೇಣಿಗೆ ಶರಣಾದ ಪೊಲೀಸ್ ಹೆಡ್ ಕಾನ್ಸ್ಟೇಬಲ್