ಬೆಂಗಳೂರು: ಎರಡು ಬೈಕ್ ಗಳ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಕುಕ್ಕನಹಳ್ಳಿಯಲ್ಲಿ ನಡೆದಿದೆ. ಕುಕ್ಕನಗಹಳ್ಳಿ ನಿವಾಸಿ ಮಂಜುನಾಥ್ ಹಾಗೂ ದೊಡ್ಡಬಳ್ಳಾಪುರ ಪಟ್ಟಣ ನಿವಾಸಿ ನಾರಾಯಣಸ್ವಾಮಿ ಮೃತ ದುರ್ದೈವಿಗಳು.
ಘಟನೆಯಲ್ಲಿ ಮಂಜುನಾಥ್ ತಾಯಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಂಜುನಾಥ್ ತಾಯಿಯೊಂದಿಗೆ ಹೆಸರಘಟ್ಟದಲ್ಲಿರುವ ದೇವಾಲಯಕ್ಕೆ ಹೋಗಿ ವಾಪಸ್ ಬರುವಾಗ ಘಟನೆ ನಡೆದಿದೆ.
ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅತೀ ವೇಗದಲ್ಲಿ ಬೈಕ್ ಚಾಲನೆಯೆ ಘಟನೆಗೆ ಕಾರಣ ಎಂದು ಶಂಕಿಸಲಾಗಿದೆ.