ಚಿಕ್ಕಮಗಳೂರು: ಟಿಂಬರ್ ಲೋಡ್ ಮಾಡಲು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್ (Bike) ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು (Chikkamagaluru) ಸಮೀಪದ ತೇಗೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಸೈಯದ್ ಗಲ್ಲಿ ನಿವಾಸಿ ಮಹಮ್ಮದ್ ಗೌಸ್ ಖಾನ್ (36) ಮೃತ ದುರ್ದೈವಿ. ತೇಗೂರು ಗ್ರಾಮದಿಂದ ನಗರಕ್ಕೆ ಹೆಂಡತಿ ಜೊತೆ ಸ್ಕೂಟರ್ನಲ್ಲಿ ಬರುವಾಗ ಹಗ್ಗ ಕಾಣಿಸದೇ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್ಗೆ ಟಿಂಬರ್ ಎಳೆದು ಲೋಡ್ ಮಾಡಲು ಹಗ್ಗ ಕಟ್ಟಲಾಗಿತ್ತು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಲ್ಯಾಬ್ ಟೆಕ್ನಿಷಿಯನ್ ಬಲಿ
ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಕುತ್ತಿಗೆಗೆ ಸಿಕ್ಕು ಲ್ಯಾಬ್ ಟೆಕ್ನಿಷಿಯನ್ ಒಬ್ಬರು ಇದೇ ರೀತಿ ಮೃತಪಟ್ಟಿದ್ದರು. ಇದನ್ನೂ ಓದಿ: ಮಾಂಜಾ ದಾರ ಮಾರಾಟಗಾರರ ಮೇಲೆ ಕ್ರಿಮಿನಲ್ ಪ್ರಕರಣ – ಹುಬ್ಬಳ್ಳಿ, ಧಾರವಾಡ ವ್ಯಾಪ್ತಿಯಲ್ಲಿ 12 ಕೇಸ್ ದಾಖಲು
