ಖಾಸಗಿ ಬಸ್ ಹರಿದು ಬೈಕ್ ಸವಾರ ದಾರುಣ ಸಾವು

Public TV
1 Min Read
Nagarbhavi Accident

ಬೆಂಗಳೂರು: ಖಾಸಗಿ ಬಸ್ (Private Bus) ಹರಿದು ಬೈಕ್ ಸವಾರ (Bike Rider) ದಾರುಣವಾಗಿ ಸಾವನ್ನಪ್ಪಿದ ಘಟನೆ ನಾಗರಬಾವಿ (Nagarbhavi) ರಿಂಗ್ ರಸ್ತೆಯ ಮಲೆಮಹದೇಶ್ವರ ದೇವಸ್ಥಾನದ ಬಳಿ ನಡೆದಿದೆ.

ಮುರಳಿ (40) ಮೃತ ಬೈಕ್ ಸವಾರ. ಮುರಳಿ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ವೇಗವಾಗಿ ಬಂದ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಘಟನೆಯಿಂದ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಬಸ್ ಮುರಳಿ ತಲೆಯ ಮೇಲೆ ಹರಿದಿದೆ. ಇದರಿಂದ ಮುರಳಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಗುಡಿಸಲಿಗೆ ಬೆಂಕಿ – ನಾಲ್ವರು ಬಾಲಕಿಯರ ಸಜೀವ ದಹನ

ಸದ್ಯ ಬಸ್ ಚಾಲಕನನ್ನು ಜ್ಞಾನಭಾರತಿ ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಘಟನೆಯಲ್ಲಿ ಸಾವನ್ನಪ್ಪಿದ ಮುರಳಿ ಮೃತದೇಹವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಜ್ಞಾನಭಾರತಿ ಸಂಚಾರಿ ಠಾಣೆಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ದುಬೈನಲ್ಲಿ ಏರ್‌ಪೋರ್ಟ್ ಅಧಿಕಾರಿಯಾಗಿದ್ದ ಮಂಗಳೂರು ಯುವತಿ ಅಪಘಾತದಲ್ಲಿ ಸಾವು

Share This Article