ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು ಜಲಾವೃತಗೊಂಡಿರುವ ಗೋಕಾಕ್ – ಶಿಂಗಳಾಪೂರ ನಡುವಿನ ಅಪಾಯಕಾರಿ ಸೇತುವೆ ಮೇಲೆ ಬೈಕ್ (Bike) ಸವಾರನೊಬ್ಬ ಹುಚ್ಚಾಟ ಪ್ರದರ್ಶನ ಮಾಡಿದ ಘಟನೆ ಗೋಕಾಕ್‌ನಲ್ಲಿ (Gokak) ನಡೆದಿದೆ.
ಪಶ್ಚಿಮಘಟ್ಟ ಪ್ರದೇಶ ಹಾಗೂ ಬೆಳಗಾವಿಯ (Belagavi) ಸುತ್ತಮುತ್ತ ಮಳೆ ಚುರುಕುಗೊಂಡಿದೆ. ಇದರಿಂದಾಗಿ ಗೋಕಾಕ್ ತಾಲೂಕಿನ ಘಟಪ್ರಭಾ ನದಿಯಲ್ಲಿ (Ghataprabha River) ನೀರಿನ ಪ್ರಮಾಣ ಹೆಚ್ಚಳವಾಗಿದೆ. ಪರಿಣಾಮ ಸೇತುವೆ ಜಲಾವೃತಗೊಂಡಿದ್ದು, ಅಪಾಯಕಾರಿ ಸೇತುವೆ ಮೇಲೆ ಬೈಕ್ ಸವಾರ ದಸ್ಸಾಹಸ ಪ್ರದರ್ಶನ ಮಾಡಿದ್ದಾನೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್ – ಪ್ರಮುಖ ಆರೋಪಿ ಮನೆಗೆ ಬೆಂಕಿ ಹಾಕಿ ಆಕ್ರೋಶ
ಸೇತುವೆ ಮೇಲೆ ತೆರಳದಂತೆ ಕರ್ತವ್ಯ ನಿರತ ಪೊಲೀಸ್ (Police) ಸಿಬ್ಬಂದಿ ಸೂಚಿಸಿದ್ದಾರೆ. ಆದರೂ ಬೈಕ್ ಸವಾರ ಪೊಲೀಸರ ಮಾತು ಕೇಳದೆ ಉಕ್ಕಿ ಹರಿಯುತ್ತಿದ್ದ ಸೇತುವೆ ಮೇಲೆ ಬೈಕ್ ಸವಾರಿ ಮಾಡಿದ್ದಾನೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವಲ್ಪ ಆಯಾ ತಪ್ಪಿದರೂ ಘಟಪ್ರಭಾ ನದಿ ಪಾಲಾಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ ಹತೋಟಿಗೆ ತರಲು ಇಬ್ಬರು ಉನ್ನತ ಅಧಿಕಾರಿಗಳ ನಿಯೋಜನೆ
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]