– ಕಳ್ಳನಿಂದ 10 ಬೈಕ್ ಜಪ್ತಿ
ಬೆಳಗಾವಿ: ಖತರ್ನಾಕ್ ಬೈಕ್ ಕಳ್ಳನಿಗೆ ಹೆಡೆಮುರಿ ಕಟ್ಟುವಲ್ಲಿ ಬೆಳಗಾವಿಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಳ್ಳರನ್ನು ಬಂಧಿಸಿರುವ ಪೊಲೀಸರು ಬರೊಬ್ಬರಿ 10 ಬೈಕ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಎಸಿಪಿ ಸದಾಶಿವ ಕಟ್ಟಿಮನಿ ಹಾಗೂ ಮಾಳಮಾರುತಿ ಠಾಣೆ ಸಿಪಿಐ ಸುನೀಲ್ ಪಾಟೀಲ್ ನೇತೃತ್ವದ ತಂಡವು ಬೆಳಗಾವಿ ಸುತ್ತಮುತ್ತಲು ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ವ್ಯಕ್ತಿ ಅಲ್ಲ ದೊಡ್ಡ ಶಕ್ತಿ: ಶ್ರೀರಾಮುಲು
ಬಂಧಿತ ಆರೋಪಿಯಿಂದ 7 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 10 ಬೈಕ್ ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಮಾಳಮಾರುತಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮಾಳಮಾರುತಿ ಪೊಲೀಸರ ಕಾರ್ಯಾಚರಣೆಗೆ ಬೆಳಗಾವಿ ನಗರ ಹಿರಿಯ ಪೊಲೀಸ್ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿ ನಗದು ಬಹುಮಾನ ಘೋಷಿಸಿದ್ದಾರೆ.