ಬೆಂಗಳೂರು: ಮೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡಿ ಎಸ್ಕೇಪ್ ಆಗ್ತಾ ಇದ್ದ ಖತರ್ನಾಕ್ ಬೈಕ್ ಕಳ್ಳನನ್ನು, ಬೆಂಗಳೂರು ಹೊರವಲಯ ನೆಲಮಂಗಲ ಟೌನ್ ಪೊಲೀಸರು ಬಂಧಿಸಿದ್ದಾರೆ.
ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿಯ ನಿವಾಸಿ ಡಿ.ಎಸ್.ಸುನೀಲ್ ಬಂಧಿತ ಆರೋಪಿ. ಬೆಂಗಳೂರು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ 11 ಬೈಕ್‍ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನೆಲಮಂಗಲ ಟೌನ್ ಪೊಲೀಸ್ ಇನ್ಸ್‌ಪೆಕ್ಟರ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕಳ್ಳನನ್ನು ಬಂಧಿಸಿದ್ದು ಪರಪ್ಪನ ಅಗ್ರಹಾರಕ್ಕೆ ಕಳುಹಿಸಿದ್ದಾರೆ.