ಬೆಂಗಳೂರು: ಮೆಟ್ರೊ ನಿಲ್ದಾಣಗಳಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನು ಕ್ಷಣಾರ್ಧದಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ನಿವಾಸಿಯಾಗಿರುವ ಮುಬಾರಕ್ ಎಂಬ ವ್ಯಕ್ತಿಯೇ ಬಂಧಿತ ಬೈಕ್ ಕಳ್ಳನಾಗಿದ್ದು, ಬೈಕ್ ಕಳ್ಳತನ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿ 10ಕ್ಕೂ ಹೆಚ್ಚು ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
Advertisement
ಆರೋಪಿ ಮುಬಾರಕ್ ಮೆಟ್ರೋ ನಿಲ್ದಾಣಗಳಲ್ಲದೇ ನಗರದ ವಿವಿಧ ಪ್ರದೇಶಗಳಲ್ಲಿ ಮಾಸ್ಟರ್ ಕೀ ಬಳಸಿ ಬೈಕ್ ಕಳ್ಳತನ ಮಾಡುತ್ತಿದ್ದ. ನಂತರ ಕದ್ದ ಬೈಕ್‍ಗಳನ್ನು ದಾಸರಹಳ್ಳಿ ಪೆಟ್ರೋಲ್ ಬಂಕ್ ಬಳಿ ಬಿಟ್ಟು ಹೋಗುತ್ತಿದ್ದ. ಮರು ದಿನ ಸ್ಥಳಕ್ಕೆ ಬರುತ್ತಿದ್ದ ಆತನ ಬಾಸ್ ಯುವರಾಜ್ ಎಂಬಾತ ಬೈಕ್ ತೆಗೆದುಕೊಂಡು ಹೋಗುತ್ತಿದ್ದ.
Advertisement
ಕದ್ದ ಬೈಕ್‍ಗಳನ್ನು ನಗರದಲ್ಲಿ ಮಾರಾಟ ಮಾಡಿದರೆ ಸಿಕ್ಕಿ ಬೀಳುವ ಅವಕಾಶಗಳು ಹೆಚ್ಚಾಗಿರುವುದರಿಂದ ಅವುಗಳನ್ನು ಗ್ರಾಮೀಣ ಭಾಗದಲ್ಲಿ ತೆಗೆದುಕೊಂಡು ಹೋಗಿ ಮಾರಾಟ ಮಾಡುತ್ತಿದ್ದರು. ಅಲ್ಲದೇ ಕದ್ದ ಬೈಕ್ ಚಾಸಿ ನಂಬರ್ ನೋಡಿ ನಕಲಿ ದಾಖಲೆಗಳನ್ನು ತಯಾರಿಸಿ ಕಡಿಮೆ ಬೆಲೆಗೆ ಮಾರುತ್ತಿದ್ದರು. ಆರೋಪಿ ಮುಬಾರಕ್ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement