ಬೆಂಗಳೂರು: ನೆಲಮಂಗಲ ಫ್ಲೈಓವರ್ ಮೇಲೆ ಯುವಕರು ವ್ಹೀಲಿಂಗ್ ಮಾಡುತ್ತಾ ಇತರ ವಾಹನಗಳಿಗೆ ತೊಂದರೆ ಕೊಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
Advertisement
ಬೆಂಗಳೂರಿನಲ್ಲಿ ಸಾಲು ಸಾಲು ರಸ್ತೆ ಅಪಘಾತಗಳಾದರೂ ಯುವಕರು ಬುದ್ಧಿ ಕಲಿಯುತ್ತಿಲ್ಲ. ನಗರದಲ್ಲಿ ಯುವಕರ ಹುಚ್ಚಾಟ ಮುಂದುವರಿದಿದ್ದು, ಪೊಲೀಸರ ಕಣ್ಣು ತಪ್ಪಿಸಿ ರಾತ್ರಿ ವೇಳೆ ಬೈಕ್ ವ್ಹೀಲಿಂಗ್ ನಡೆಸಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಇದನ್ನೂ ಓದಿ: ದಳ ತೊರೆದು ಕೈ ಹಿಡಿಯಲು ನಿರ್ಧರಿಸಿದ ಕೋಲಾರ ಶಾಸಕ ಶ್ರೀನಿವಾಸಗೌಡ
Advertisement
Advertisement
ನೆಲಮಂಗಲ ಫ್ಲೈಓವರ್‌ನಲ್ಲಿ ರಾತ್ರಿ ವೇಳೆ ವ್ಹೀಲಿಂಗ್ ಮಾಡುತ್ತಾ 15 ಹುಡುಗರ ತಂಡ ಇತರೆ ವಾಹನ ಸವಾರರಿಗೆ ತೊಂದರೆ ಕೊಟ್ಟಿದ್ದಾರೆ. ಒಂದು ಕಿಲೋಮೀಟರ್ ದಾರಿಯುದ್ದಕ್ಕೂ ವ್ಹೀಲಿಂಗ್ ಮಾಡುತ್ತಾ, ರಸ್ತೆಯಲ್ಲಿ ಚಲಿಸುವ ಇತರ ವಾಹನಗಳಿಗೆ ಸೈಡ್ ಬೀಡದೆ ಪುಂಡಾಟಿಕೆ ನಡೆಸಿದ್ದಾರೆ. ಇದೇ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರು ಚಾಲಕರೊಬ್ಬರು ಯುವಕರ ವ್ಹೀಲಿಂಗ್ ದೃಶ್ಯವನ್ನು ತಮ್ಮ ಮೊಬೈಲ್‍ನಲ್ಲಿ ಚಿತ್ರಿಕರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಇದೀಗ ವೈರಲ್ ಆಗಿದೆ. ಈ ವೀಡಿಯೋ ಸುಮಾರು ಮೂರ್ನಾಲ್ಕು ದಿನಗಳ ಹಿಂದಿನದು ಎಂದು ಹೇಳಲಾಗಿದೆ. ಇದನ್ನೂ ಓದಿ: 20 ಕೋಟಿಗೂ ಅಧಿಕ ತೆರಿಗೆ ವಂಚಿಸಿದ್ದಾರೆ ಸೋನು ಸೂದ್: ಆದಾಯ ತೆರಿಗೆ ಇಲಾಖೆ
Advertisement
ಕೆಲ ದಿನಗಳಲ್ಲಿ ಹಿಂದೆಯಷ್ಟೆ ಯುವಕರ ತಂಡವೊಂದು ವ್ಹೀಲಿಂಗ್ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿತ್ತು. ಯುವಕರಿಗೆ ಪೊಲೀಸರು ದಂಡ ಹಾಕಿ ಇನ್ನೊಮ್ಮೆ ಈ ರೀತಿ ಮಾಡಬಾರದು ಎಂದು ಎಚ್ಚರಿಕೆಯನ್ನು ಸಹ ಕೊಟ್ಟಿದ್ದಾರೆ. ಆದರೂ ಯುವಕರು ಪದೇ ಪದೇ ಹೈವೆಗಳಲ್ಲಿ ರೀತಿ ವ್ಹೀಲಿಂಗ್ ಮಾಡುತ್ತಿರುವುದು ವಾಹನ ಸವಾರರಿಗೆ ಕಿರಿಕಿರಿಯಾಗಿದ್ದು, ಪೊಲೀಸರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಿದೆ.