ಹಾಸನ: ವ್ಹೀಲಿಂಗ್ ಮಾಡುತ್ತಿದ್ದ ವೇಳೆ ಪುಂಡರ ಬೈಕ್ ಯುವತಿಯರಿಗೆ ಗುದ್ದಿರುವ ಘಟನೆ ಹಾಸನದಲ್ಲಿ (Hassan) ನಡೆದಿದೆ. ಬೈಕ್ ಗುದ್ದಿದ ಪರಿಣಾಮ ಇಬ್ಬರು ಯುವತಿಯರು ಗಂಭೀರ ಗಾಯಗೊಂಡಿದ್ದಾರೆ.
ಹಾಸನ ನಗರದ ಸಾಲಗಾಮೆ ರಸ್ತೆಯ ಕನ್ನಡ ಸಾಹಿತ್ಯ ಪರಿಷತ್ ಭವನದ ಎದುರು ಬುಧವಾರ ರಾತ್ರಿ ಘಟನೆ ನಡೆದಿದೆ. ಭೂಮಿಕಾ, ಸಿಂಚನಾ ಎಂಬ ಯುವತಿಯರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ಸೇರಿಸಲಾಗಿದೆ. ಇದನ್ನೂ ಓದಿ: ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ
ಆಗಷ್ಟೇ ಊಟ ಮುಗಿಸಿ ಭೂಮಿಕಾ, ಸಿಂಚನಾ ಬೈಕ್‌ನಲ್ಲಿ ಬರುತ್ತಿದ್ದರು. ಜನನಿಬಿಡ ಪ್ರದೇಶದಲ್ಲಿ ವ್ಹೀಲಿಂಗ್ ಮಾಡಿಕೊಂಡು ಬಂದ ಪುಂಡರು, ಭೂಮಿಕಾ ಹಾಗೂ ಸಿಂಚನಾಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮವಾಗಿ ಭೂಮಿಕಾ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಆಕೆಯನ್ನು ಬೆಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ವ್ಹೀಲಿಂಗ್ ಮಾಡಿಕೊಂಡು ಬಂದು ಯುವತಿಯರಿಗೆ ಗುದ್ದಿದ ಶಾಕೀರ್ ಹಾಗೂ ಅಪ್ರಾಪ್ತನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಟ್ಟೆ ಬಿಚ್ಚಿ ಗೂಸಾ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ. ವ್ಹೀಲಿಂಗ್ ಮಾಡಿ ಅಪಘಾತ ಮಾಡಿದ ಶಾಕೀರ್ ಹಾಗೂ ಅಪ್ರಾಪ್ತ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಓವರ್‌ಟೇಕ್ ಅಲ್ಲ, ಬೊಲೆರೋ ಟಯರ್ ಸ್ಫೋಟದಿಂದ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ – KSRTC ಸ್ಪಷ್ಟನೆ
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಪುಂಡರ ಆಟಾಟೋಪಕ್ಕೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.
Web Stories