ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Biklu Shiva Murder case) 5ನೇ ಆರೋಪಿಯಾಗಿರುವ ಮಾಜಿ ಸಚಿವ ಬೈರತಿ ಬಸವರಾಜ್ (Byrathi Basavaraj) ಇಂದು 2ನೇ ಬಾರಿಗೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
ಈ ನಡುವೆ ತಮ್ಮ ವಿರುದ್ಧದ ಎಫ್‌ಐಆರ್ ರದ್ದು ಕೋರಿ ಶುಕ್ರವಾರವೇ (ಜು.18) ಹೈಕೋರ್ಟ್‌ಗೆ (Karnataka Highcourt) ಅರ್ಜಿ ಸಲ್ಲಿಸಿದ್ದರು. ಶನಿವಾರ (ಜು.19) ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಇಂದಿಗೆ ಮುಂದೂಡಿಕೆ ಮಾಡಿತ್ತು. ಇದನ್ನೂ ಓದಿ: ಒಂದೇ ಬೈಕ್‌ನಲ್ಲಿ ನಾಲ್ವರು ಪ್ರಯಾಣ – ಓವರ್ ಸ್ಪೀಡ್‌ನಿಂದ ಡಿವೈಡರ್‌ಗೆ ಡಿಕ್ಕಿ; ಓರ್ವ ಸಾವು
ಈಗಾಗಲೇ ಈ ಪ್ರಕರಣದಲ್ಲಿ ಹನ್ನೊಂದು ಜನ ಆರೋಪಿಗಳು ಅರೆಸ್ಟ್ ಆಗಿದ್ದು, ಇವರಲ್ಲಿ ಹಲವರು ಬೈರತಿ ಬಸವರಾಜ್‌ಗೆ ಆಪ್ತರು ಎನ್ನಲಾಗಿದೆ. ಆರೋಪಿಗಳ ವಿಚಾರಣೆಯಲ್ಲಿ ಸಿಕ್ಕ ಮಾಹಿತಿ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಲಿದ್ದಾರೆ. ನಡುವೆ ಜಗದೀಶ್ ಪತ್ತೆಯಾಗದ ಹಿನ್ನೆಲೆ ಇಂದು ಬೈರತಿ ಬಸವರಾಜ್ ರನ್ನು ಬಂಧಿಸುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿ ಬ್ಯಾಂಗಲ್ ಸ್ಟೋರ್, ಬೇಕರಿಗೆ ನುಗ್ಗಿದ ಲಾರಿ – ಮೂವರು ಸಾವು, ಐವರಿಗೆ ಗಾಯ
ಸತತ ಮೂರುವರೆಗಂಟೆ ಗ್ರಿಲ್
ಇನ್ನೂ ಕಳೆದ ಶನಿವಾರ ಭಾರತಿನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ಮಾಜಿ ಸಚಿವ ಬೈರತಿ ಬಸವರಾಜ್ ಸತತ ಮೂರುವರೆಗಂಟೆಗಳ ಕಾಲ ವಿಚಾರನೆ ಎದುರಿಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಕೊಲೆ ಪ್ರಕರಣದಲ್ಲಿ ವಿಚಾರಣೆಗೆ ಕರೆದಿದ್ರು, ಪೊಲೀಸರು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದ್ದೀನಿ. ಇದರಲ್ಲಿ ನನ್ನ ಪಾತ್ರ ಇಲ್ಲ ಅಂತಾ ಹೇಳಿದ್ದೇನೆ. ನನಗೂ ಕೊಲೆಗೂ ಸಂಬಂಧವಿಲ್ಲ, ಯಾವ ಜಗ್ಗನೂ ನನಗೆ ಗೊತ್ತಿಲ್ಲ. ಬುಧವಾರ ಮತ್ತೆ ವಿಚಾರಣೆಗೆ ಬರಬೇಕೆಂದು ಹೇಳಿದ್ದಾರೆ. ಬರುತ್ತೇನೆ. ತನಿಖೆಗೆ ಎಲ್ಲ ರೀತಿಯಿಂದಲೂ ಸಹಕಾರ ಕೊಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಹಾವೇರಿ | ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ – ಐವರಿಗೆ ಗಾಯ