ಬೆಂಗಳೂರು: ಬಿಕ್ಲು ಶಿವ ಕೊಲೆ ಕೇಸ್‌ಲ್ಲಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿದೆ.
ಬೈರತಿ ಬಸವರಾಜ್ ಅವರನ್ನು ಕೋರಮಂಗಲದಲ್ಲಿರುವ 42ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಶಾಸಕರ ಆಂಜಿಯೋಗ್ರಾಮ್ ರಿಪೋರ್ಟ್‌ನ್ನು ನ್ಯಾಯಾಧೀಶರಿಗೆ ತನಿಖಾಧಿಕಾರಿ ಡಿವೈಎಸ್‌ಪಿ ಗೌತಮ್ ಸಲ್ಲಿಸಿದರು. ವರದಿಯನ್ನು ಪರಿಶೀಲಿಸಿ, ವಿಚಾರಣೆ ನಡೆಸಿದ ನ್ಯಾಯಾಧೀಶರು, ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದ್ದಾರೆ. ಇದನ್ನೂ ಓದಿ: ಬಿಕ್ಲು ಶಿವ ಕೊಲೆ ಕೇಸ್ – ಮಾಜಿ ಸಚಿವ ಬೈರತಿ ಬಸವರಾಜ್ ಅರೆಸ್ಟ್
ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು.
ಸುಪ್ರೀಂನಲ್ಲಿ ಜಾಮೀನು ಅರ್ಜಿ ವಜಾ
ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ಬೆನ್ನಲ್ಲೇ ಸುಪ್ರೀಂಕೋರ್ಟ್ ಮೊರೆ ಹೋಗಿದ್ದ ಬೈರತಿ ಬಸವರಾಜ್‌ಗೆ ಅಲ್ಲಿಯೂ ಹಿನ್ನಡೆಯಾಗಿತ್ತು.
ಕೊಲೆ ಪ್ರಕರಣದಲ್ಲಿ ಸರಣಿ ಘಟನೆಗಳು ಪೂರಕವಾಗಿ ನಡೆದಿವೆ. 2 ಗುಂಪುಗಳು ಜಗಳ ಆಡುವಾಗ ಆರೋಪಿತ ಶಾಸಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಸ್ತಿಯ ಜಿಪಿಎ ತೋರಿಸಿದ್ದಾರೆ. ಬಿಕ್ಲು ಶಿವನಿಗೆ ತಾಯಿಯ ಮುಂದೆ ಗನ್ ತೋರಿಸಲಾಗಿದೆ. ಕಾಲ್ ರೆಕಾರ್ಡ್ ಪರಿಶೀಲನೆ ನಡೆಸಿದಾಗ ಗನ್ ಹೊಂದಿರುವ ವ್ಯಕ್ತಿ ಜಗದೀಶ್ ಜೊತೆಗೆ ಸಂಪರ್ಕ ಹೊಂದಿದ್ದರು. ಬಳಿಕ ಇವರು ಶ್ರೀಲಂಕಾಕ್ಕೆ ಪಲಾಯನ ಮಾಡಿದ್ದಾರೆ. ಬೈರತಿ ಬಸವರಾಜ್ ವಿಚಾರಣೆ ಎದುರಿಸಬೇಕು. ಈ ಹಿಂದೆ ನಿರೀಕ್ಷಣಾ ಜಾಮೀನು ಪಡೆದಾಗ ಹೇಗೆ ಇರಬೇಕು ಅಂತ ಗೊತ್ತಿಲ್ವಾ ಅಂತ ಕೋರ್ಟ್ ಗರಂ ಆಗಿ ಪ್ರಶ್ನಿಸಿತ್ತು. ಇದನ್ನೂ ಓದಿ: ಇಸಿಜಿಯಲ್ಲಿ ವ್ಯತ್ಯಾಸ – ಶಾಸಕ ಬೈರತಿ ಬಸವರಾಜ್‌ಗೆ ಜಯದೇವದಲ್ಲಿ ಆಂಜಿಯೋಗ್ರಾಂ?

