ಗಾಂಧಿನಗರ: ಬಿಲ್ಕಿಸ್ ಬಾನೊ (Bilkis Bano)ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲಾ 11 ಅಪರಾಧಿಗಳು ಗುಜರಾತ್ ಜೈಲಿನಲ್ಲಿ (Gujarat Jail) ಶರಣಾಗಿದ್ದಾರೆ. ಪಂಚಮಹಲ್ ಜಿಲ್ಲೆಯ ಗೋಧ್ರಾ ಉಪ ಕಾರಾಗೃಹದಲ್ಲಿ ಭಾನುವಾರ ರಾತ್ರಿ ಶರಣಾಗಿದ್ದಾರೆ ಎಂದು ಇನ್ಸ್‌ಪೆಕ್ಟರ್ ಎನ್‌ಎಲ್ ದೇಸಾಯಿ ತಿಳಿಸಿದ್ದಾರೆ.
ಗೋಧ್ರಾ ಗಲಭೆಯ (Godhra Riot) ಸಂದರ್ಭದಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಕುಟುಂಬದ ಸದಸ್ಯರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 11 ಮಂದಿಯನ್ನು ಗುಜರಾತ್ ಸರ್ಕಾರವು 2022ರ ಸ್ವಾತಂತ್ರ್ಯ ದಿನದಂದು ಬಳಕೆಯಲ್ಲಿಲ್ಲದ ಕಾನೂನಿನ ಆಧಾರದ ಮೇಲೆ ಬಿಡುಗಡೆ ಮಾಡಿತ್ತು. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ದಿನ ಮುಸ್ಲಿಮರು, ಕ್ರೈಸ್ತರು ಪ್ರಾರ್ಥನೆ ಮಾಡಿ: ಅಸ್ಸಾಂ ಸಿಎಂ ಮನವಿ
Advertisement
Advertisement
ಬಾನೊ ಮತ್ತು ನಾಗರಿಕ ಸಮಾಜದ ಕಾರ್ಯಕರ್ತರು ಅವರ ಬಿಡುಗಡೆಯ ವಿರುದ್ಧ ಮೇಲ್ಮನವಿಗಳನ್ನು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಅಪರಾಧಿಗಳ ಬಿಡುಗಡೆ ಆದೇಶವನ್ನು ರದ್ದುಗೊಳಿಸಿತ್ತು. ಅಲ್ಲದೇ ಶರಣಾಗತಿಗೆ ಕಾಲಾವಕಾಶ ಕೋರಿ ಅಪರಾಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ಇತ್ತೀಚೆಗೆ ವಜಾಗೊಳಿಸಿತ್ತು. ಭಾನುವಾರದ (ಜ.21) ಒಳಗೆ ಶರಣಾಗುವಂತೆ ಕೋರ್ಟ್ ಸೂಚನೆ ನೀಡಿತ್ತು. ಇದನ್ನೂ ಓದಿ: ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ: ಹೆಚ್‌ಡಿಕೆ
Advertisement
ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿ, ಕುಟುಂಬದವರ ವಿವಾಹ, ಪೋಷಕರ ಜವಾಬ್ದಾರಿ ಕಾರಣ ನೀಡಿ ಸಲ್ಲಿಸಿರುವ ಅರ್ಜಿಗಳನ್ನು ಕೋರ್ಟ್ ಪರಿಗಣಿಸಿಲ್ಲ. ಪ್ರಕರಣದ 11 ಅಪರಾಧಿಗಳು ಅಧಿಕಾರಿಗಳ ಮುಂದೆ ಶರಣಾಗುವಂತೆ ತಿಳಿಸಿದೆ ಎಂದು ಸೂಚಿಸಿತ್ತು. ಇದನ್ನೂ ಓದಿ: ಶತಮಾನಗಳ ಕನಸು ನನಸಾಗಲು ಕ್ಷಣಗಣನೆ – ಅಯೋಧ್ಯೆ ಬಾಲರಾಮನಿಗೆ ಮೊದಲ ಮಜ್ಜನ
Advertisement
ಅದರಂತೆ ಬಕಾಭಾಯಿ ವೋಹಾನಿಯಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೋಹಾನಿಯಾ, ಗೋವಿಂದ್ ನಾಯ್, ಜಸ್ವಂತ್ ನಾಯ್, ಮಿತೇಶ್ ಭಟ್, ಪ್ರದೀಪ್ ಮೋರ್ಧಿಯಾ, ರಾಧೇಶ್ಯಾಮ್ ಶಾ, ರಾಜುಭಾಯ್ ಸೋನಿ, ರಮೇಶ್ ಚಂದನಾ ಮತ್ತು ಶೈಲೇಶ್ ಭಟ್ ಹೆಸರಿನ 11 ಅಪರಾಧಿಗಳು ಶರಣಾಗಿದ್ದಾರೆ. ಇದನ್ನೂ ಓದಿ: