ನವದೆಹಲಿ: ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭಾರತ್ ಯೋಜನೆ 100 ದಿನಗಳನ್ನು ಪೂರೈಸಿದ್ದು, ಇದೇ ಸಂದರ್ಭದಲ್ಲಿ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
ಯೋಜನೆ ಜಾರಿಯಾಗಿ 100 ದಿನಗಳನ್ನು ಪೂರೈಸಿದ್ದು, ಇದುವರೆಗೂ 6,85,000 ಮಂದಿಗೆ ಇದರ ಸೌಲಭ್ಯ ತಲುಪಿದೆ. ಈ ಕುರಿತು ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಜೆಪಿ ನಡ್ಡಾ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.
Advertisement
Congratulations to the Indian government on the first 100 days of @AyushmanNHA. It’s great to see how many people have been reached by the program so far. @PMOIndia https://t.co/AHHktUt95z
— Bill Gates (@BillGates) January 17, 2019
Advertisement
ಸಚಿವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ ಬಿಲ್ ಗೇಟ್ಸ್, ಆಯುಷ್ಮಾನ್ ಭಾರತ್ ಯೋಜನೆ ಕೇವಲ 100 ದಿನಗಳಲ್ಲಿ ಇಷ್ಟು ಮಂದಿಯನ್ನು ತಲುಪಿರುವುದು ಸಂತಸ ತಂದಿದೆ. ಭಾರತ ಸರ್ಕಾರಕ್ಕೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿಗಳ ಟ್ವಿಟ್ಟರ್ ಖಾತೆ ಹಾಗೂ ಸಚಿವಾಲಯದ ಆಯುಷ್ಮಾನ್ ಭಾರತ್ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ.
Advertisement
Advertisement
ದಿನದಿಂದ ದಿನಕ್ಕೆ ಯೋಜನೆ ಫಲಾನುಭವಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಯೋಜನೆ ಮೂಲಕ ಹಲವು ಮಂದಿ ಆರೋಗ್ಯ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಜೆಪಿ ನಡ್ಡಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಬಿಲ್ ಗೇಟ್ಸ್ ಮಾತ್ರವಲ್ಲದೇ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕರು ಕೂಡ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಜನರು ಆರೋಗ್ಯ ಸೇವೆಯನ್ನು ಪಡೆಯಲು ಯೋಜನೆ ಸಹಕಾರಿ ಆಗಿದೆ ಎಂದು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ಅವರಿಗೆ ಅಭಿನಂಧನೆ ಸಲ್ಲಿಸಿದ್ದರು. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
ಪ್ರಧಾನಿ ನರೇಂದ್ರ ಮೋದಿ ಅವರು 2018 ಸೆ. 23 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನದ ಅಂಗವಾಗಿ ಆಯುಷ್ಮಾನ್ ಭಾರತ್ ಯೋಜನೆಗೆ ಚಾಲನೆ ನೀಡಿದ್ದರು. ಈ ಯೋಜನೆ ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಲಭ್ಯವಾಗಲಿದ್ದು, ಕುಟುಂಬವೊಂದಕ್ಕೆ ವಾರ್ಷಿಕ 5 ಲಕ್ಷ ರೂ. ಖರ್ಚು ಭರಿಸಲಾಗುತ್ತದೆ.
In just first 100 days of #AyushmanBharat, 685000 beneficiaries availed free health care & the number is rising rapidly. pic.twitter.com/E5cTI0CvsF
— Jagat Prakash Nadda (@JPNadda) January 2, 2019
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv