ಚೆನ್ನೈ: ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ತಮಿಳುನಾಡು ಸರ್ಕಾರ ಗುಡ್‍ನ್ಯೂಸ್ ನೀಡಿದೆ. 6 ರಿಂದ 12ನೇ ತರಗತಿಯವರೆಗೆ ಓದಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‍ಗಳ ಪ್ರವೇಶಾತಿ ವೇಳೆ ಶೇ.7.5 ಮೀಸಲಾತಿ ಕಲ್ಪಿಸುವ ಮಸೂದೆ ಮಂಡನೆಯಾಗಿದೆ.
ಎಂಜಿನಿಯರಿಂಗ್, ಕೃಷಿ, ಮೀನುಗಾರಿಕೆ ಮತ್ತು ಕಾನೂನಿನಂತಹ ವೃತ್ತಿಪರ ಶಿಕ್ಷಣದಲ್ಲಿ ಶೇ.7.5 ಮೀಸಲಾತಿ ನೀಡುವ ಮಸೂದೆಯನ್ನು ಮುಖ್ಯಮಂತ್ರಿ ಸ್ಟಾಲಿನ್ ವಿಧಾನಸಭೆಯಲ್ಲಿ ಇಂದು ಮಂಡಿಸಿದ್ದಾರೆ.
Advertisement
Advertisement
ಮೀಸಲಾತಿ ಜಾರಿಯಾದರೆ 6ನೇ ತರಗತಿಯಿಂದ 12ನೇ ತರಗತಿಯವರೆಗೆ ರಾಜ್ಯ ಸರ್ಕಾರಿ ಶಾಲೆಗಳಲ್ಲಿ ಓದಿದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯಗಳು, ಖಾಸಗಿ ಕಾಲೇಜುಗಳು, ಸರ್ಕಾರಿ ಅನುದಾನಿತ ಮತ್ತು ಸರ್ಕಾರಿ ಕಾಲೇಜುಗಳಲ್ಲಿ ನೀಡಲಾಗುವ ಪದವಿ ಕೋರ್ಸ್‍ಗಳ ಪ್ರವೇಶದ ವೇಳೆ ಮೀಸಲಾತಿಯನ್ನು ಪಡೆಯಲಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!
Advertisement
ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸುವ ಸಂಬಂಧ ನಿವೃತ್ತ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಮುರುಗೇಶನ್ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗಿತ್ತು. ಈ ಆಯೋಗದ ಶಿಫಾರಸಿನಂತೆ ಕಳೆದ ತಿಂಗಳು ಮಸೂದೆ ಮಂಡಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿತ್ತು. ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು ಎಂದು ಸರ್ಕಾರ ತಿಳಿಸಿತ್ತು.
Advertisement
ಮಸೂದೆಯನ್ನು ಮಂಡಿಸಿ ಮಾತನಾಡಿದ ಸ್ಟಾಲಿನ್, ಬಡತನ ಮತ್ತು ಅರಿವಿನ ಕೊರತೆಯಿಂದಾಗಿ ಸರ್ಕಾರಿ ಶಾಲೆಗಳಿಂದ ವೃತ್ತಿಪರ ಕೋರ್ಸ್ ಪ್ರವೇಶಿಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಿದೆ. ಈ ಸಂಖ್ಯೆ ಏರಿಸಲು ಈ ಮಸೂದೆ ನೆರವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು
ಸರ್ಕಾರಿ ಶಾಲೆಯಲ್ಲಿ ಓದಿದವರ ಪೈಕಿ 2020-21ರಲ್ಲಿ ಅಣ್ಣಾ ವಿಶ್ವವಿದ್ಯಾಲಯದಲ್ಲಿ ಕೇವಲ ಶೇ.0.83 ವಿದ್ಯಾರ್ಥಿಗಳು ದಾಖಲಾಗಿದ್ದರು. ಸರ್ಕಾರಿ ಮತ್ತು ಅನುದಾನಿತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಕ್ರಮವಾಗಿ ಶೇ.6.31 ಮತ್ತು ಶೇ.0.44 ರಷ್ಟು ಮಂದಿ ದಾಖಲಾಗಿದ್ದರೆ, ಪಶುವೈದ್ಯಕೀಯ ವಿಜ್ಞಾನದಲ್ಲಿ ಶೇ.3.7, ಮೀನುಗಾರಿಕೆಯಲ್ಲಿ ಶೇ.4.89, ತಿರುಚಿಯಲ್ಲಿರುವ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯ ಶೇ.1ಕ್ಕಿಂತ ಕಡಿಮೆ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದಾಖಲಾಗಿದ್ದರು.