`ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ (Kichcha Sudeep) ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಬ್ಲಾಕ್ಬಸ್ಟರ್ ‘ವಿಕ್ರಾಂತ್ ರೋಣ’ ಸಿನಿಮಾದ ಭರ್ಜರಿ ಯಶಸ್ಸಿನ ಬಳಿಕ ಸುದೀಪ್ ಮತ್ತು ನಿರ್ದೇಶಕ ಅನೂಪ್ ಭಂಡಾರಿ ಮತ್ತೆ ಈ ಚಿತ್ರಕ್ಕಾಗಿ ಕೈಜೋಡಿಸಿದ್ದಾರೆ.

ಬಿಡುಗಡೆಯಾಗಿರುವ ಹೊಸ ಪೋಸ್ಟರ್ ಅತ್ಯಂತ ರೋಮಾಂಚಕವಾಗಿದ್ದು, ಚಿತ್ರವು ವಿಶ್ವದರ್ಜೆಯ ಮೇಕಿಂಗ್ ಒಳಗೊಂಡಿದೆ ಎಂಬುದಕ್ಕೆ ಸ್ಪಷ್ಟ ಸಾಕ್ಷಿ ಒದಗಿಸಿದೆ. ಈ ಚಿತ್ರಕ್ಕಾಗಿ ಬೆಂಗಳೂರಿನಲ್ಲಿ ಬೃಹತ್ ಹಾಗೂ ಅದ್ಧೂರಿ ಸೆಟ್ ನಿರ್ಮಿಸಲಾಗಿದ್ದು, ಸದ್ಯ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಕಿಡ್ನ್ಯಾಪ್ ಮಾಡಿ ಹಲ್ಲೆ ಮಾಡಿದ್ರು; ದುನಿಯಾ ವಿಜಯ್ ಪುತ್ರನ ವಿರುದ್ಧ ಗಾಯಾಳು ಮನೀಷ್ ಆರೋಪ

ತೆಲುಗಿನ ಪ್ಯಾನ್-ಇಂಡಿಯಾ ಹಿಟ್ ಸಿನಿಮಾ ‘ಹನುಮಾನ್’ ಖ್ಯಾತಿಯ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. 2027ರ ಮಾರ್ಚ್ ಒಳಗೆ ಟೀಸರ್ ಬಿಡುಗಡೆ ಆಗಲಿದ್ದು, 2027ರ ಜುಲೈ-ಸೆಪ್ಟೆಂಬರ್ ನಡುವೆ ಟ್ರೇಲರ್ & ಹಾಡುಗಳು ಅನಾವರಣಗೊಳ್ಳಲಿವೆ. 2027ರ ವರ್ಷಾಂತ್ಯದಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ‘ಬಿಲ್ಲ ರಂಗ ಬಾಷಾ’ ತೆರೆಗೆ ಬರಲಿದೆ.

