ಮುಂಬೈ: ಬಿಗ್ ಬುಲ್ ಎಂದೇ ಪ್ರಸಿದ್ದಿ ಪಡೆದಿರುವ ಷೇರು ಹೂಡಿಕೆದಾರ ರಾಕೇಶ್ ಜುಂಜುನ್‌ವಾಲ (62) ಇಂದು ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ.
ಸ್ಟಾಕ್ ಮಾರುಕಟ್ಟೆಯ ಹಿರಿಯ ಹೂಡಿಕೆದಾರರೂ ಆಗಿರುವ ಜುಂಜುನ್‌ವಾಲಾ ಬರ್ಕ್‌ಷೈರ್ ಹಾತ್‌ವೇ ಅಧ್ಯಕ್ಷರು ಹಾಗೂ ಸಿಇಓ ಸಹ ಆಗಿದ್ದರು. ಈಚೆಗಷ್ಟೇ ಜೆಟ್ ಏರ್‌ವೇಸ್ ಸಿಇಒ ದುಬೆ ಹಾಗೂ ಇಂಡಿಗೋ ಮಾಜಿ ಮುಖ್ಯಸ್ಥ ಆದಿತ್ಯ ಘೋಷ್ ಅವರೊಂದಿಗೆ ಸೇರಿ ‘ಆಕಾಶ ಏರ್ʼ ಸ್ಥಾಪಿಸಿದ್ದರು.
ಜುಂಜುನ್‌ವಾಲಾ ಸುಮಾರು 580 ಕೋಟಿ ಅಮೆರಿಕನ್ ಡಾಲರ್ ಆಸ್ತಿಯ ಒಡೆಯನಾಗಿದ್ದು, ಭಾರತದ 36 ನೇ ಶ್ರೀಮಂತ ವ್ಯಕ್ತಿ ಎಂಬ ಖ್ಯಾತಿಯನ್ನು ಪಡೆದಿದ್ದಾರೆ.
1960ರ ಜುಲೈ 5ರಂದು ರಾಜಾಸ್ಥಾನಿ ಕುಟುಂಬದಲ್ಲಿ ಜನಿಸಿದರು. ಇವರ ತಂದೆ ಆದಾಯ ತೆರಿಗೆ ಆಯುಕ್ತರಾಗಿ ಕೆಲಸ ಮಾಡುತ್ತಿದ್ದರು. ಮೊದಲು ಜುಂಜುನ್‌ವಾಲ ಅವರು ಸಿಡೆನ್ಹ್ಯಾಮ್ ಕಾಲೇಜಿನಿಂದ ಪದವಿ ಪಡೆದು ನಂತರ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸೇರಿಕೊಂಡರು.
ಸಕ್ರೀಯ ಹೂಡಿಕೆದಾರರಾಗಿದ್ದ ಅವರು, ಜುಂಜುನ್‌ವಾಲಾ ಆಪ್ಟೆಕ್ ಲಿಮಿಟೆಡ್ ಮತ್ತು ಹಂಗಾಮಾ ಡಿಜಿಟಲ್ ಮೀಡಿಯಾ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ನ ಅಧ್ಯಕ್ಷರಾಗಿದ್ದರು. ಲಿಮಿಟೆಡ್ ಮತ್ತು ಪ್ರೈಮ್ ಫೋಕಸ್ ಲಿಮಿಟೆಡ್, ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್, ಬಿಲ್ಕೇರ್ ಲಿಮಿಟೆಡ್, ಪ್ರಜ್ ಇಂಡಸ್ಟ್ರೀಸ್ ಲಿಮಿಟೆಡ್, ಪ್ರೊವೋಗ್ ಇಂಡಿಯಾ ಲಿಮಿಟೆಡ್, ಕಾನ್ಕಾರ್ಡ್ ಬಯೋಟೆಕ್ ಲಿಮಿಟೆಡ್, ಇನ್ನೋವಸಿಂತ್ ಟೆಕ್ನಾಲಜೀಸ್ ಲಿಮಿಟೆಡ್, ಮಿಡ್ ಡೇ ಮಲ್ಟಿಮೀಡಿಯಾ ಲಿಮಿಟೆಡ್, ನಾಗಾರ್ಜುನ ಕನ್ಸ್ಟ್ರಕ್ಷನ್ ಲಿಮಿಟೆಡ್, ವಿಸರ್ಜನಾ ಲಿಮಿಟೆಡ್, ವಿಸರ್ಜನಾ ಕನ್ಸ್ಟ್ರಕ್ಷನ್ ಕಂಪನಿಯ ನಿರ್ದೇಶಕರ ಮಂಡಳಿಯಲ್ಲಿ ಹೂಡಿಕೆ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]