ಚೆನ್ನೈ: ರಕ್ಷಣಾ ಪಡೆಗಳ ಮುಖ್ಯಸ್ಥ (Chief of Defence Staff – CDS) ಜನರಲ್ ಬಿಪಿನ್ ರಾವತ್ ಅವರಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿಯ ಕೂನೂರಿನಲ್ಲಿ ಪತನಗೊಂಡಿದ್ದು, ರಾವತ್ ತೀವ್ರವಾಗಿ ಗಾಯಗೊಂಡಿದ್ದಾರೆ.
ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ಸೂಲೂರಿನಿಂದ ವೆಲ್ಲಿಂಗ್ಟನ್ಗೆ ತೆರಳುತ್ತಿತ್ತು. ಘಟನಾ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಪತ್ನಿ ಸೇರಿ 11 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಈಗ ಲಭ್ಯವಾಗಿದೆ. ಬಿಪಿನ್ ರಾವತ್ ಸ್ಥಿತಿ ಗಂಭೀರವಾಗಿದ್ದು, ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
The IAF Mi-17V5 helicopter was airborne from Sulur for Wellington. There were 14 persons on board, including the crew: Indian Air Force https://t.co/gmpEuHF1zw
— ANI (@ANI) December 8, 2021
ವಾಯುಪಡೆಯ Mi-17V5 ಹೆಲಿಕಾಪ್ಟರ್ನಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರು ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಅಧಿಕಾರಿಗಳಾದ ಗುರುಸೇವಕ್ ಸಿಂಗ್, ಜಿತೇಂದ್ರ ಕುಮಾರ್, ವಿವೇಕ್ ಕುಮಾರ್, ಸಾಯಿತೇಜಾ, ಸತ್ಪಾಲ್ ಅವರೊಂದಿಗೆ ಪ್ರಯಾಣಿಸುತ್ತಿದ್ದರು. ತೀವ್ರವಾಗಿ ಗಾಯಗೊಂಡಿರುವ ಬಿಪಿನ್ ರಾವತ್ ಮತ್ತು ಇತರ ನಾಲ್ವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.