ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ಪ್ರದೇಶದಲ್ಲಿ (ಕೂನೂರು ಬಳಿ) ಸಿಡಿಎಸ್ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಾರ್ಲಿಮೆಂಟ್‍ಗೆ ಇಂದು ವಿವರಿಸಿದರು.
Advertisement
ದುರಂತಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅಪಾರ ದುಃಖ ಮತ್ತು ಭಾರವಾದ ಹೃದಯದಿಂದ ನಿನ್ನೆ ಮಧ್ಯಾಹ್ನ ಸಂಭವಿಸಿದ ಹೆಲಿಕಾಪ್ಟರ್ ಪತನದ ದುರದೃಷ್ಟಕರ ಸುದ್ದಿಯನ್ನು ತಿಳಿಸಲು ನಾನು ನಿಂತಿದ್ದೇನೆ. ಭಾರತದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿದ್ದರು. ವಾಯುಪಡೆಯ ಹೆಲಿಕಾಪ್ಟರ್ ನಿನ್ನೆ ಬೆಳಗ್ಗೆ 11:48ಕ್ಕೆ ಸೂಲೂರ್ ಏರ್‌ಬೇಸ್‌ನಿಂದ ಹೊರಟು, ಮಧ್ಯಾಹ್ನ 12:15ಕ್ಕೆ ವೆಲ್ಲಿಂಗ್‍ಟನ್‍ನಲ್ಲಿ ಇಳಿಯುವ ನಿರೀಕ್ಷೆ ಇತ್ತು. ಆದರೆ ಮಧ್ಯಾಹ್ನ 12:08ರ ಸುಮಾರಿಗೆ ಸೂಳೂರು ವಾಯುನೆಲೆಯಲ್ಲಿ ಏರ್ ಟ್ರಾಫಿಕ್ ತನ್ನ ನಿಯಂತ್ರಣ ಕಳೆದುಕೊಂಡು ಪತನಗೊಂಡಿದೆ ಎಂದು ವಿವರಿಸಿದರು. ಇದನ್ನೂ ಓದಿ: ಪತನಗೊಂಡ ಹೆಲಿಕಾಪ್ಟರ್‌ನಲ್ಲಿ ಬ್ಲ್ಯಾಕ್ ಬಾಕ್ಸ್ ಪತ್ತೆ- ಬಯಲಾಗುತ್ತಾ ದುರಂತದ ರಹಸ್ಯ?
Advertisement
Advertisement
ಕೆಲವು ಸ್ಥಳೀಯರು ಕೂನೂರು ಸಮೀಪದ ಕಾಡಿನಲ್ಲಿ ಬೆಂಕಿಯನ್ನು ಕಂಡು ಸ್ಥಳಕ್ಕೆ ಧಾವಿಸಿದರು. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ಹೆಲಿಕಾಪ್ಟರ್ ಅನ್ನು ಸ್ಥಳೀಯರು ನೋಡಿದ್ದಾರೆ. ಅವಶೇಷಗಳಡಿ ಸಿಲುಕಿದ್ದ ಎಲ್ಲರನ್ನೂ ಮಿಲಿಟರಿ ಆಸ್ಪತ್ರೆಗೆ ಸಾಗಿಸಲಾಯಿತು. ದುರಾದೃಷ್ಟವಶಾತ್ ಸಿಡಿಎಸ್ ಜನರಲ್ ಬಿಪಿನ್ ರಾವತ್, ಪತ್ನಿ ಸೇರಿದಂತೆ ಹೆಲಿಕಾಪ್ಟರ್‌ನಲ್ಲಿದ್ದ 13 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಮರಕ್ಕೆ ಡಿಕ್ಕಿ ಹೊಡೆದು ಬೆಂಕಿ ಜ್ವಾಲೆ ಕಾಣಿಸಿತು – ಬಳಿಕ ಮತ್ತೊಂದು ಮರಕ್ಕೆ ಡಿಕ್ಕಿ ಹೊಡೆಯಿತು
Advertisement
ಈ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಸ್ಥಿತಿ ಗಂಭೀರವಾಗಿದ್ದರೂ, ಆರೋಗ್ಯ ಸ್ಥಿರವಾಗಿದೆ. ಅವರನ್ನು ಉಳಿಸಿಕೊಳ್ಳಲು ವೈದ್ಯರು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಗ್ರೂಪ್ ಕ್ಯಾಪ್ಟನ್ ಸಿಂಗ್ ಅವರು ತೀವ್ರ ಸುಟ್ಟ ಗಾಯಗಳಿಂದ ವೆಲ್ಲಿಂಗ್ಟನ್‍ನ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹೆಲಿಕಾಪ್ಟರ್ ದುರಂತಕ್ಕೆ ಬಲಿಯಾಗಿರುವ ಸಾಯಿ ತೇಜ್‍ಗೆ 27 ವರ್ಷ!
ಹೆಲಿಕಾಪ್ಟರ್ ಪತನಕ್ಕೆ ಸಂಬಂಧಿಸಿದಂತೆ ಭಾರತೀಯ ವಾಯುಪಡೆ ತನಿಖೆಗೆ ಆದೇಶಿಸಲಾಗಿದೆ. ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ತನಿಖಾ ತಂಡವು ನಿನ್ನೆಯೇ ದುರಂತದ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಆರಂಭಿಸಿದೆ ಎಂದು ಸಚಿವರು ಮಾಹಿತಿ ನೀಡಿದರು. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಯಾರು ಗೊತ್ತಾ?
ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಅಂತಿಮ ಸಂಸ್ಕಾರವನ್ನು ಸಂಪೂರ್ಣ ಸೇನಾ ಗೌರವಗಳೊಂದಿಗೆ ನೆರವೇರಿಸಲಾಗುವುದು. ಇತರ ಸೇನಾ ಸಿಬ್ಬಂದಿಯ ಅಂತಿಮ ವಿಧಿವಿಧಾನಗಳನ್ನು ಸೂಕ್ತ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಇದನ್ನೂ ಓದಿ: ಇಂದು ಸಂಜೆ ದೆಹಲಿಗೆ ರಾವತ್ ಪಾರ್ಥಿವ ಶರೀರ – ನಾಳೆ ಮಧ್ಯಾಹ್ನವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ
ಇದಕ್ಕೂ ಮುನ್ನ ದುರಂತದಲ್ಲಿ ಸಾವಿಗೀಡಾದ ಬಿಪಿನ್ ರಾವತ್, ಪತ್ನಿ ಹಾಗೂ ಸೇನಾ ಸಿಬ್ಬಂದಿಗೆ ಪಾರ್ಲಿಮೆಂಟ್‍ನಲ್ಲಿ ಮೌನಾಚರಣೆ ಮೂಲಕ ಗೌರವ ಸಲ್ಲಿಸಲಾಯಿತು. ಇದನ್ನೂ ಓದಿ: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ದುರ್ಮರಣ