ನವದೆಹಲಿ: ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ (ಕನೂರು ಬಳಿ) ಪ್ರದೇಶದಲ್ಲಿ ಭಾರತೀಯ ವಾಯುಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಸ್ಥಿತಿ ಗಂಭೀರವಾಗಿದೆ. ಇದು ಅವರಿಗೆ ಎರಡನೇ ಅಪಘಾತವಾಗಿದೆ. ಕೆಲ ವರ್ಷಗಳ ಹಿಂದೆಯೂ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಆಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದರು.
Advertisement
ಹೌದು, 2015ರಲ್ಲಿ ನಾಗಾಲ್ಯಾಂಡ್‍ನ ದಿಮಾಪುರ್‍ನಲ್ಲಿ ಚೀತಾ ಹೆಲಿಕಾಪ್ಟರ್ ಪತನಗೊಂಡಿತ್ತು. ಆ ಹೆಲಿಕಾಪ್ಟರ್‍ನಲ್ಲಿ ಪ್ರಯಾಣಿಸುತ್ತಿದ್ದ ಬಿಪಿನ್ ರಾವತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಆಗ ಅವರು ಲೆಫ್ಟಿನೆಂಟ್ ಜನರಲ್ ಆಗಿದ್ದರು. ಇದನ್ನೂ ಓದಿ: ಬಿಪಿನ್ ರಾವತ್ ಸ್ಥಿತಿ ಗಂಭೀರ – Mi-17 V5 ಹೆಲಿಕಾಪ್ಟರ್ ವಿಶೇಷತೆ ಏನು?
Advertisement
2015ರ ಫೆಬ್ರವರಿ 3ರಂದು ದಿಮಾಪುರದಲ್ಲಿ ಚೀತಾ ಹೆಲಿಕಾಪ್ಟರ್ ಟೇಕಾಫ್ ಆಗುತ್ತಿದ್ದಾಗ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತ್ತು. ಎಂಜಿನ್ ವೈಫಲ್ಯದಿಂದಾಗಿ ಅಪಘಾತ ಸಂಭವಿಸಿತ್ತು. ಆ ಹೆಲಿಕಾಪ್ಟರ್‍ನಲ್ಲಿದ್ದ ಬಿಪಿನ್ ರಾವತ್ ಸ್ವಲ್ಪದರಲ್ಲಿ ಅಪಾಯದಿಂದ ಪಾರಾದರು. ಆಗ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಹೆಲಿಕಾಪ್ಟರ್‍ನಲ್ಲಿದ್ದ ಪೈಲಟ್‍ಗಳು ಮತ್ತು ಕರ್ನಲ್ ಕೂಡ ಬದುಕುಳಿದಿದ್ದರು.
Advertisement
Advertisement
ಇದೀಗ ತಮಿಳುನಾಡಿನಲ್ಲಿ ಸಂಭವಿಸಿದ ಸೇನಾಪಡೆ ಹೆಲಿಕಾಪ್ಟರ್ ಪತನದಲ್ಲಿ ರಾವತ್ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಬಿಪಿನ್ ರಾವತ್ ಅವರಿಗೆ ಇದು ಎರಡನೇ ಅಪಘಾತವಾಗಿದೆ. ಇದನ್ನೂ ಓದಿ: ನಿಮಿಷಗಳ ಅಂತರದಲ್ಲಿ ಲ್ಯಾಂಡ್ ಆಗಬೇಕಿದ್ದ Mi-17V5 ಪತನ – 11 ಮಂದಿಯ ಮೃತದೇಹ ಪತ್ತೆ