ನವದೆಹಲಿ: ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರಿದ್ದ ಹೆಲಿಕಾಪ್ಟರ್ ದುರಂತಕ್ಕೆ ಪೈಲಟ್ ದೋಷವೇ ಕಾರಣ ಎಂದು ಮೂಲಗಳು ತಿಳಿಸಿವೆ.
ಕಳೆದ ತಿಂಗಳು ತಮಿಳುನಾಡಿನ ಕೂನೂರು ಬಳಿ ರಷ್ಯಾ ಮೂಲದ ಎಂಐ-17ವಿ5 ಹೆಲಿಕಾಪ್ಟರ್ ಪತನಗೊಂಡಿತ್ತು. ಸೇನಾ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಮಧುಲಿಕಾ ಸೇರಿದಂತೆ 12 ಮಂದಿ ದುರಂತದಲ್ಲಿ ಸಾವನ್ನಪ್ಪಿದ್ದರು. ಇದನ್ನೂ ಓದಿ: ಮೋದಿಗೆ ಭದ್ರತಾ ಲೋಪ – ಪಂಜಾಬ್ ತನ್ನ ಭವಿಷ್ಯದ ಬಗ್ಗೆ ಚಿಂತಿಸಬೇಕಿದೆ: ಬೊಮ್ಮಾಯಿ
Advertisement
Advertisement
ಪೈಲಟ್‌ನ ಸಂಪೂರ್ಣ ನಿಯಂತ್ರಣದಲ್ಲಿರುವಾಗ ಹೆಲಿಕಾಪ್ಟರ್ ಅಜಾಗರೂಕತೆಯಿಂದ ಭೂಪ್ರದೇಶ ಅಥವಾ ನೀರು ಅಡಚಣೆಯಿಂದ ಈ ದುರಂತ ಸಂಭವಿಸಿದೆ ಎಂದು ಇಂಟರ್‌ನ್ಯಾಷನಲ್ ಏರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ ತಿಳಿಸಿದೆ.
Advertisement
ಮೋಡ ಕವಿದ ವಾತಾವರಣದಲ್ಲಿ ಅಪಘಾತ ಸಂಭವಿಸಿದೆ. ಹೆಲಿಕಾಪ್ಟರ್ ಅಪಘಾತದ ಸಮಯದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಆಗಿಲ್ಲ ಎಂದು ಹೇಳಿದೆ. ಇದನ್ನೂ ಓದಿ: ಲಾರಿ, ಬಸ್ ಮುಖಾಮುಖಿ ಡಿಕ್ಕಿ- 6 ಮಂದಿ ಸ್ಥಳದಲ್ಲೇ ಸಾವು
Advertisement
ಹೆಲಿಕಾಪ್ಟರ್ ದುರಂತಕ್ಕೆ ಸಂಬಂಧಿಸಿದಂತೆ ದೇಶದ ಉನ್ನತ ಹೆಲಿಕಾಪ್ಟರ್ ಪೈಲಟ್ ಏರ್ ಮಾರ್ಷಲ್ ಮನ್ವೇಂದ್ರ ಸಿಂಗ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಲಾಗಿತ್ತು.