ಕೊಲ್ಕತ್ತಾ: ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದ ಬೀರ್ಭುಮ್ ಗ್ರಾಮದಲ್ಲಿ ನಡೆದ ಹಿಂಸಾಚಾರವು ಇದೀಗ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ. ರಾಜ್ಯಪಾಲರೂ ಸೇರಿದಂತೆ ಪ್ರತಿಪಕ್ಷದ ನಾಯಕರು ಘಟನೆಯನ್ನೇ ಪ್ರಮುಖವಾಗಿಟ್ಟುಕೊಂಡು ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಮತಾ ಬ್ಯಾನರ್ಜಿ ಅವರನ್ನು ಒತ್ತಾಯಿಸುತ್ತಿದ್ದಾರೆ.
Advertisement
ಈ ನಡುವೆ ಬೀರ್ಭುಮ್ ಗ್ರಾಮಕ್ಕೆ ಭೇಟಿ ನೀಡಿರುವ ಮಮತಾ ಬ್ಯಾನರ್ಜಿ ಅವರು ಹಿಂಸಾಚಾರ ನಡೆದ ಸ್ಥಳವನ್ನು ಪರಿಶೀಲಿಸಿ ಕಟ್ಟಿನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಹಾನಿಗೊಳಗಾದ ಮನೆಗಳ ದುರಸ್ತಿಗೆ 2 ಲಕ್ಷ ರೂ. ಹಾಗೂ ಸಂತ್ರಸ್ತ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಉದ್ಯೋಗಾವಕಾಶ ನೀಡುವ ಭರವಸೆಯನ್ನು ನೀಡಿದ್ದಾರೆ. ಸ್ಥಳದಲ್ಲಿ 10 ಕುಟುಂಬಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆ ಮಾಡಿದಾರೆ. ಅಲ್ಲದೆ ಬೆಂಕಿ ಅನಾಹುತದಿಂದ ಗಾಯಗೊಂಡವರ ಚಿಕಿತ್ಸೆಗೆ 50 ಸಾವಿರ ರೂ., ತೀವ್ರ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Advertisement
Advertisement
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸ್ಥಳೀಯರು ನೀಡಿದ ದೂರಿನ ಮೇರೆಗೆ ರಾಮ್‍ಪುರಹತ್ ಬ್ಲಾಕ್-1 ಅಧ್ಯಕ್ಷ ಅನಾರುಲ್ ಶೇಖ್ ಅವರನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶ ನೀಡಿದ್ದಾರೆ. ಘಟನೆಯ ಬಗ್ಗೆ ಬಿಜೆಪಿ ಮುಖಂಡರು ಆರೋಪಿಸುತ್ತಿರುವುದು ಇಲ್ಲಿನ ರಾಜಕೀಯ ಹಿನ್ನಡೆ. ಹಿಂಸಾಚಾರ ಹಾಗೂ ಕಾನೂನು ಬಾಹೀರತೆಗೆ ಅವಕಾಶ ನೀಡಿದಂತಾಗುತ್ತಿದೆ. ಈ ಘಟನೆಯ ಹಿಂದೆ ದೊಡ್ಡ ಶಕ್ತಿಯಿದೆ ಎಂಬುದು ಇದರಿಂದ ಗೋಚರವಾಗುತ್ತದೆ ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಆಯ್ತು ಈಗ ಸಿಎನ್‌ಜಿ, ಪಿಎನ್‌ಜಿ ದರದಲ್ಲೂ ಏರಿಕೆ
Advertisement
ಇದೇ ವೇಳೆ ಮಮತಾ ಬ್ಯಾನರ್ಜಿ ಅವರನ್ನು ಸುತ್ತುವರಿದಿದ್ದ ಗ್ರಾಮಸ್ಥರು, ನಮ್ಮ ದೂರುಗಳಿಗೆ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಘಟನೆಯ ಕುರಿತು ಮಾಹಿತಿ ನೀಡಿರುವ ಪೊಲೀಸರು, ಮಂಗಳವಾರ ಹಿಂಸಾಚಾರ ಘಟನೆ ನಡೆದಿದ್ದು, ಒಂದು ದಿನದ ನಂತರ ಸುಟ್ಟ ಮೃತದೇಹಗಳನ್ನು ಹೊರತೆಗೆಯಲಾಯಿತು. ಘಟನೆಯ ನಂತರ ಅನೇಕರು ಹಿಂಸಾಚಾರಕ್ಕೆ ಹೆದರಿ ಗ್ರಾಮ ತೊರೆದಿದ್ದಾರೆ. ಈ ಪ್ರಕರಣದಲ್ಲಿ ಟಿಎಂಸಿ ಮುಖಂಡನ ಹತ್ಯೆ ಹಾಗೂ ಗ್ರಾಮಸ್ಥರ ಹತ್ಯೆಗೆ ಸಂಬಂಧಿಸಿದಂತೆ ಎರಡು ಎಫ್‍ಐಆರ್ ಗಳನ್ನು ದಾಖಲಿಸಲಾಗಿದೆ. ಈಗಾಗಲೇ ಸುಮಾರು 20 ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಆರೋಪಿಗಳನ್ನು ನ್ಯಾಯಾಂಗಕ್ಕೆ ತರಲು ರಾಜ್ಯಕ್ಕೆ ಯಾವುದೇ ರೀತಿಯಲ್ಲಿ ಸಹಾಯ ಮಾಡಲು ನಮ್ಮ ಸರ್ಕಾರ ಸಿದ್ಧವಿದೆ. ಇಂತಹ ಘೋರ ಅಪರಾಧ ಎಸಗಿದವರಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ವಿಧಿಸಲಿದೆ ಎಂದು ನಾನುಭಾವಿಸುತ್ತೇನೆ. ಇಂತಹ ಅಪರಾಧ, ಅಪರಾಧಿಗಳನ್ನು ಎಂದಿಗೂ ಕ್ಷಮಿಸಬೇಡಿ ಎಂದು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ಇದು ಬಿಜೆಪಿ ನಮ್ಮ ಸರ್ಕಾರದ ಮಾನಹಾನಿಗಾಗಿ ಮಾಡಿರುವ ಪಿತೂರಿ. ಬಿರ್ಭೂಮ್ ಘಟನೆಗೆ ಕಾರಣರಾದ ಎಲ್ಲರ ವಿರುದ್ಧ ಅವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ವಿಸ್ತಾರವಾದ, ಪ್ರತ್ಯೇಕವಾದ ನಿಲ್ಲುವವರೆಗೂ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ: ಮುತಾಲಿಕ್
ಏನಿದು ಪ್ರಕರಣ?
ಇಲ್ಲಿನ ಬಗುಟಿ ಗ್ರಾಮ ಪಂಚಾಯ್ತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು 10 ರಿಂದ 12 ಮನೆಗೆ ಬೆಂಕಿ ಹಚ್ಚಿದ್ದರು.
ಇದರಿಂದಾಗಿ 8 ಮಂದಿ ಸಜೀವ ದಹನವಾಗಿದ್ದರು. ಇದರಲ್ಲಿ ಇಬ್ಬರು ಮಕ್ಕಳೂ ಸಹ ಇದ್ದರು ಎಂಬುದಾಗಿ ಬೀರ್ಭುಮ್ ಎಸ್‍ಪಿ ನಾಗೇಂದ್ರ ತ್ರಿಪಾಟಿ ಮಾಹಿತಿ ನೀಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಸ್ವಯಂಪ್ರೇರಿತವಾಗಿಯೇ ವಿಚಾರಣೆ ನಡೆಸಲು ಮುಂದಾಗಿತ್ತು. ಈ ನಡುವೆ ಜಿಲ್ಲೆಯ ಕೆಲ ಕುಟುಂಬಗಳು ಹಿಂಸಾಚಾರಕ್ಕೆ ಬೆಚ್ಚಿಬಿದ್ದಿದ್ದು, ತಮ್ಮ ಮನೆಗಳನ್ನು ತೊರೆದು ಹೋಗಿದ್ದಾರೆ. ಇದನ್ನೂ ಓದಿ: ಜಗನ್ ಸಹೋದರಿ ಭಾಷಣದ ವೇಳೆ ಜೇನು ದಾಳಿ – ಟವೆಲ್ ಬೀಸಿದ ಕಾರ್ಯಕರ್ತರು