ಬೆಂಗಳೂರು: ಚಿಕನ್ ಪ್ರಿಯರೇ ಸ್ವಲ್ಪ ಎಚ್ಚರವಾಗಿರಿ. ಸಿಲಿಕಾನ್ ಸಿಟಿಯಲ್ಲಿ ಈಗ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಚಿಕನ್ ತಿನ್ನೋ ಮೊದಲು ಹುಷಾರಾಗಿರಿ.
ಐಟಿ-ಬಿಟಿ ಮಂದಿ ಈಗಾಗಲೇ ಡೆಂಗ್ಯೂ, ಚಿಕೂನ್ ಗುನ್ಯ ಜ್ವರಗಳಿಂದ ಸಾವನ್ನಪ್ಪುತ್ತಿದ್ದಾರೆ. ಈ ಸಂದರ್ಭದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ದಾಸರಹಳ್ಳಿಯಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಕಳೆದ ವಾರ ತಮಿಳುನಾಡಿನ 15 ಕೋಳಿಯನ್ನ ನಗರದ ದಾಸರಹಳ್ಳಿಯ ಕೆಜಿಎನ್ ಕೋಳಿ ಅಂಗಡಿ ಮಾಲೀಕ ಖರಿದೀಸಿದ್ದರು. ಅದರಲ್ಲಿ ನಾಲ್ಕೈದು ಕೋಳಿಗಳು ಸಾವನ್ನಪಿದ್ದು, ಮೃತ ಕೋಳಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ.
ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಿಬಿಎಂಪಿ ಎಚ್ಚೆತ್ತುಕೊಂಡು ಹೊರರಾಜ್ಯದ ಕೋಳಿಗಳನ್ನ ಖರೀದಿಸದಂತೆ ಚಿಕನ್ ಅಸೋಸಿಯೇಷನ್‍ಗೆ ತಿಳಿಸಿದೆ. ಅಷ್ಟೇ ಅಲ್ಲದೇ ಈ ಹಕ್ಕಿ ಜ್ವರದ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳುವುದಾಗಿ ಬಿಬಿಎಂಪಿ ಮೇಯರ್ ಸಂಪತ್ ರಾಜ್ ತಿಳಿಸಿದ್ದಾರೆ.