ಚಾಮರಾಜನಗರ: ನೆರೆಯ ರಾಜ್ಯ ಕೇರಳದಲ್ಲಿ (Kerala) ಹಕ್ಕಿ ಜ್ವರದ (Bird flu) ಆತಂಕದ ಹಿನ್ನೆಲೆಯಲ್ಲಿ ಚಾಮರಾಜನಗರ ಗಡಿಯಲ್ಲಿ (Chamarajanagar Border) ಕಟ್ಟೆಚ್ಚರ ವಹಿಸಲಾಗಿದೆ.
Advertisement
ಬಂಡೀಪುರ ಅಭಯಾರಣ್ಯದ ಕೇರಳ ಕರ್ನಾಟಕ ಗಡಿ ಮೂಳೆ ಹೊಳೆಯಲ್ಲಿ ಬಿಗಿ ತಪಾಸಣೆ ನಡೆಸಲಾಗುತ್ತಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅಭಯಾರಣ್ಯದ ಬಳಿ ಹಕ್ಕಿ ಜ್ವರ ಭೀತಿಗೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಕೇರಳದಿಂದ ಬರುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ. ಕೇರಳದಿಂದ ಕರ್ನಾಟಕಕ್ಕೆ ಬರುವ ಸರಕು, ಕೋಳಿ ತುಂಬಿದ್ದ ವಾಹನಗಳಿಗೆ ಸ್ಯಾನಿಟೈಸೇಷನ್ ಮಾಡಲಾಗುತ್ತಿದೆ. ಇದನ್ನೂ ಓದಿ: ಕಲ್ಯಾಣ ಕರ್ನಾಟಕಕ್ಕೆ ಮೋದಿ ಭೇಟಿ – ಬೀದರ್‌ನಲ್ಲಿ ಬಸ್ ಇಲ್ಲದೇ ಪ್ರಯಾಣಿಕರು ಪರದಾಟ
Advertisement
Advertisement
ಇತ್ತೀಚೆಗೆ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಬಳಿ ನಾಟಿ ಕೋಳಿ ಸಾವನ್ನಪ್ಪಿದ್ದವು. ಇದರಿಂದ ಹಕ್ಕಿ ಜ್ವರದ ಆತಂಕವಿತ್ತು. ಇದೀಗ ಆ ಕೋಳಿಯ ಸ್ಯಾಂಪಲ್ ಅನ್ನು ಲ್ಯಾಬ್‌ಗೆ ರವಾನಿಸಲಾಗಿದೆ.
Advertisement
ಸದ್ಯ ಯಾವುದೇ ಭಯಪಡುವ ಅಗತ್ಯವಿಲ್ಲ, ವರದಿ ಬಂದ ನಂತರ ಮತ್ತಷ್ಟು ಸೂಕ್ತ ಕ್ರಮ ವಹಿಸುತ್ತೇವೆ ಎಂದು ಚಾಮರಾಜನಗರದ ಪಶುಪಾಲನೆ ಹಾಗೂ ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಶಿವಣ್ಣ ತಿಳಿಸಿದ್ದಾರೆ. ಇದನ್ನೂ ಓದಿ: ವೈದ್ಯೆಯ ಸೋಗಿನಲ್ಲಿ ರೋಗಿಗಳ ಬಳಿ ಚಿನ್ನಾಭರಣ ಕಳವು ಮಾಡ್ತಿದ್ದವಳು ಅರೆಸ್ಟ್
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k