ರಾಯಚೂರು: ರಾಜ್ಯದಲ್ಲಿ ಈಗ ಹಕ್ಕಿ ಜ್ವರದ ಭೀತಿ ಹೆಚ್ಚಾಗುತ್ತಿದೆ. ಆಂಧ್ರಪ್ರದೇಶ ಹಾಗೂ ತೆಲಂಗಾಣದ ಗಡಿಯಲ್ಲಿರುವ ರಾಯಚೂರು (Raichuru) ಜಿಲ್ಲೆಯಲ್ಲೂ ಆತಂಕ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಹಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿ ಜ್ವರ ಶಂಕೆ ಭಯ ಹುಟ್ಟಿಸಿದೆ. ಹಕ್ಕಿಗಳ ನಿಗೂಢ ಸಾವಿನ ಬೆನ್ನಲ್ಲೇ ಇದೀಗ ಜಿಲ್ಲಾಡಳಿತ ಅಲರ್ಟ್ ಆಗಿದೆ.
ಇದುವರೆಗೂ ಜಿಲ್ಲೆಯಲ್ಲಿ 30ಕ್ಕೂ ಹೆಚ್ಚು ವಿವಿಧ ಪಕ್ಷಿಗಳು ಸಾವನ್ನಪ್ಪಿವೆ. ಮಾನ್ವಿ ಪಟ್ಟಣ, ರಬಣಕಲ್ ಸೇರಿ ಹಲವೆಡೆ ಪ್ರತಿದಿನ ಪಕ್ಷಿಗಳು ಸಾವನ್ನಪ್ಪುತ್ತಿವೆ. ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿ ವಿವಿಧ ಪ್ರಭೇದದ ಪಕ್ಷಿಗಳು ನಿಗೂಢವಾಗಿ ಪ್ರಾಣ ಬಿಡುತ್ತಿವೆ. ಪಕ್ಕದ ಆಂಧ್ರಪ್ರದೇಶ ತೆಲಂಗಾಣದಲ್ಲಿ ಕಾಣಿಸಿಕೊಂಡ ಹಕ್ಕಿ ಜ್ವರ ಜಿಲ್ಲೆಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ.ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ತಮ್ಮ ತಪ್ಪು ಮುಚ್ಚಿಕೊಳ್ಳಲು ಕ್ಷೇತ್ರ ಮರುವಿಂಗಡಣೆಗೆ ಅಪಸ್ವರ: ಬೊಮ್ಮಾಯಿ
ಮಾನ್ವಿ ತಾಲೂಕಿನಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿರುವ ಕುರಿತ `ಪಬ್ಲಿಕ್ ಟಿವಿ’ ವರದಿ ಬಳಿಕ ಜಿಲ್ಲಾಡಳಿತ, ಪಶುಸಂಗೋಪನೆ ಇಲಾಖೆ ಎಚ್ಚೆತ್ತುಕೊಂಡಿವೆ. ತೆಲಂಗಾಣ, ಆಂಧ್ರಪ್ರದೇಶ ಗಡಿಭಾಗದಲ್ಲಿ ಹೈಅಲರ್ಟ್ ಆಗಿದೆ. ರ‍್ಯಾಪಿಡ್ ರೆಸ್ಪಾನ್ಸ್ ಟೀಂ ರಚನೆ ಮಾಡಲಾಗಿದೆ. ತೆಲಂಗಾಣ ಹಾಗೂ ಆಂಧ್ರಪ್ರದೇಶ ಗಡಿಯಿಂದ ಕೋಳಿ, ಕೋಳಿ ಉತ್ಪನ್ನ ಬರದಂತೆ ತಡೆಯಲು ಚೆಕ್ ಪೋಸ್ಟ್ನಲ್ಲಿ ಪರಿಶೀಲನೆ ಮಾಡಲಾಗುತ್ತಿದೆ.
ಹಕ್ಕಿಗಳು ಮರದ ಮೇಲಿನಿಂದ ಏಕಾಏಕಿ ಕೆಳಗೆ ಬಿದ್ದು ಕೆಲಹೊತ್ತಿನಲ್ಲಿ ಸಾವನ್ನಪ್ಪುತ್ತಿವೆ. ಕೆಳಗೆ ಬಿದ್ದ ಬಳಿಕ ಕುಡಿಯಲು ನೀರನ್ನ ಇಟ್ಟರೂ ಕುಡಿಯದೆ ಪಕ್ಷಿಗಳು ಸಾವನ್ನಪ್ಪುತ್ತಿವೆ. ಪಕ್ಷಿಗಳ ಸಾವಿಗೆ ಕಾರಣ ತಿಳಿಯದೇ ಸ್ಥಳೀಯರಿಗೆ ಹಕ್ಕಿ ಜ್ವರದ ಆತಂಕ ಹೆಚ್ಚಾಗಿದೆ. ಈಗಾಗಲೇ ಸಾವನ್ನಪ್ಪಿದ ಪಕ್ಷಿಯ ಕಳೆಬರವನ್ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ವರದಿ ಬರುವುದು ಇನ್ನೂ ಬಾಕಿಯಿದೆ. ಆದ್ರೆ ಜನರಲ್ಲಿ ಆತಂಕ ಎಂದು ಒತ್ತಾಯಿಸಿದ್ದಾರೆ.
ಒಟ್ಟಿನಲ್ಲಿ, ಜಿಲ್ಲೆಯಲ್ಲಿ ಪಕ್ಷಿಗಳು ಏಕಾಏಕಿ ಸಾವನ್ನಪ್ಪುತ್ತಿರುವುದು ಅಚ್ಚರಿ, ಆತಂಕವನ್ನ ಒಟ್ಟೋಟ್ಟಿಗೆ ಮೂಡಿಸಿದೆ. ಹೆಚ್ಚುತ್ತಿರುವ ತಾಪಮಾನವು ಪರಿಣಾಮ ಬೀರಿರುವ ಶಂಕೆಯಿದ್ದು, ಹಕ್ಕಿ ಜ್ವರದ ಅನುಮಾನವೂ ಇದೆ. ಗಡಿರಾಜ್ಯಗಳಿಂದ ಕೋಳಿ ಹಾಗೂ ಕೋಳಿ ಉತ್ಪನ್ನಗಳು ಬರದಂತೆ ತಡೆದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುತ್ತಿರುವುದು ಜನರಲ್ಲಿ ಕೊಂಚ ನಿರಾಳತೆ ಮೂಡಿಸಿದೆ.ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನಿಸಿದ್ನಾ ಪುಣೆ ಅತ್ಯಾಚಾರ ಆರೋಪಿ? – ಬಂಧನದ ವೇಳೆ ಕುತ್ತಿಗೆಯಲ್ಲಿ ಗಾಯದ ಗುರುತು ಪತ್ತೆ