ಬೆಂಗಳೂರು: ವಿಧಾನಸಭೆ ಕಾರ್ಯದರ್ಶಿ ಮೂರ್ತಿ ಅವರು ಮೊಗಸಾಲೆಯಲ್ಲಿಯೇ ಕೇಕ್ ಕತ್ತರಿಸಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.
ಪವಿತ್ರ ಸ್ಥಳದಲ್ಲಿ ಜುಲೈ 17ರಂದು ನಡೆದ ಈ ಬರ್ತ್ ಡೇ ಪಾರ್ಟಿಯಲ್ಲಿ ಚಿತ್ರನಟಿ ಕಮ್ ಮೇಲ್ಮನೆ ಸದಸ್ಯೆ ತಾರಾ ಸೇರಿ ಹಲವರು ಭಾಗಿಯಾಗಿದ್ದರು. ಪಾರ್ಟಿಯಲ್ಲಿದ್ದ ಅರ್ಧದಷ್ಟು ಮಂದಿ ವಿಧಾನಸೌಧ ಸಿಬ್ಬಂದಿಯೇ ಅಲ್ಲ ಎನ್ನಲಾಗಿದೆ.
Advertisement
ಪಾಸ್ ಇಲ್ಲದೇ ಇವರೆಲ್ಲ ನಿರ್ಬಂಧಿತ ಸ್ಥಳಕ್ಕೆ ಹೇಗೆ ಪ್ರವೇಶ ಪಡೆದ್ರು? ವಿಧಾನಸಭೆ ಸಭಾಂಗಣದ ಮೊಗಸಾಲೆಯಲ್ಲಿ ಬರ್ತ್‍ಡೇ ಪಾರ್ಟಿ ಮಾಡಬಹುದಾ? ನಿರ್ಬಂಧಿತ ಸ್ಥಳದಲ್ಲಿ ಬರ್ತ್ ಡೇ ಪಾರ್ಟಿಗೆ ಅನುಮತಿ ಕೊಟ್ಟಿದ್ದು ಯಾರು? ಎಲ್ಲರಿಗೂ ಇದೇ ರೀತಿ ಪಾರ್ಟಿಗೆ ಅವಕಾಶ ಕೊಡುತ್ತೀರಾ? ಸ್ಪೀಕರ್ ರಮೇಶ್ ಕುಮಾರ್ ಸಾಹೇಬರೇ ಇದು ಸರೀನಾ? ಅನ್ನೋ ಹಲವಾರು ಪ್ರಶ್ನೆಗಳು ಇದೀಗ ಜನಸಾಮಾನ್ಯರಲ್ಲಿ ಮೂಡಿದೆ.
Advertisement
Advertisement