ತುಮಕೂರು: ಕಾಂಗ್ರೆಸ್ ಶಾಸಕ ಜಿ.ಪರಮೇಶ್ವರ್ ಅವರ ಬರ್ತ್ ಡೇ ಫ್ಲೆಕ್ಸ್ ತೆರವುಗೊಳಿಸಿ ಜೆಡಿಎಸ್ ಶಾಸಕರ ಹುಟ್ಟುಹಬ್ಬ ಫ್ಲೆಕ್ಸ್ ಗೆ ಅನುವು ಮಾಡಿಕೊಟ್ಟ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಜಿಲ್ಲೆಯ ಕೊರಟಗೆರೆ ಪಟ್ಟಣ ಪಂಚಾಯತ್ ಬಳಿ ಮಾತಿನ ಚಕಮಕಿ ನಡೆದಿದೆ.
Advertisement
ಆಗಸ್ಟ್ 6 ರಂದು ಜಿ.ಪರಮೇಶ್ವರ್ ಹುಟ್ಟುಹಬ್ಬ ನಿಮಿತ್ತ ಕೊರಟಗೆರೆ ಪಟ್ಟಣದಲ್ಲಿ ಹಾಗೂ ಹಳ್ಳಿಗಳಲ್ಲಿ ಪರಮೇಶ್ವರ್ ಫ್ಲೆಕ್ಸ್‍ಗಳನ್ನು ಅಭಿಮಾನಿಗಳು ಕಟ್ಟಿದ್ದರು. ಈ ಫ್ಲೆಕ್ಸ್ ಗಳನ್ನು ಕೊರಟಗೆರೆ ಪಟ್ಟಣ ಪಂಚಾಯತ್ ಸಿಬ್ಬಂದಿ ತೆರುವುಗೊಳಿಸುತ್ತಿದ್ದರು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಫ್ಲೆಕ್ಸ್ ತೆರವುಗೊಳಿಸದಂತೆ ಅಡ್ಡಿಪಡಿಸಿದ್ದರು. ಈ ನಡುವೆ ಜೆಡಿಎಸ್ ನಿಂದಲೂ ಮಾಜಿ ಶಾಸಕ ಸುಧಾಕರ್ ಲಾಲ್ ರ ಹುಟ್ಟುಹಬ್ಬಕ್ಕೆ ಫ್ಲೆಕ್ಸ್ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಇದನ್ನೂ ಓದಿ: ಸಂವಿಧಾನದತ್ತ ಸಂಸದ ಸ್ಥಾನಕ್ಕೆ ಬೆಲೆ ಕೊಡದ ಶ್ರೀನಿವಾಸ್‍ರದ್ದು ವಿಕೃತ ಮನಸ್ಥಿತಿ: ಬಿಜೆಪಿ ಟೀಕೆ
Advertisement
Advertisement
ಪರಮೇಶ್ವರ್ ಅವರ ಫ್ಲೆಕ್ಸ್ ಇರುವುದರಿಂದ ಸುಧಾಕರ್ ಅವರ ಫ್ಲೆಕ್ಸ್ ಹಾಕಲು ಜಾಗ ಇರಲಿಲ್ಲ. ಹಾಗಾಗಿ ಪರಮೇಶ್ವರ್ ಅವರ ಫ್ಲೆಕ್ಸ್ ತೆರವುಗೊಳಿಸಿದ್ದರು ಎನ್ನಲಾಗಿದೆ. ಹೀಗಾಗಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರು ಫ್ಲೆಕ್ಸ್ ತೆರವುಗೊಳಿಸದಂತೆ ಪಟ್ಟು ಹಿಡಿದರೆ, ಜೆಡಿಎಸ್ ಕಾರ್ಯಕರ್ತರು ಫ್ಲೆಕ್ಸ್ ತೆರುವುಗೊಳಿಸಲು ಒತ್ತಾಯಿಸಿದ್ದರು. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು. ಇದನ್ನೂ ಓದಿ: ಮಿತ್ರಮಂಡಳಿಯಲ್ಲಿ ಬಿರುಕು: ಎಸ್‍ಟಿಎಸ್ ವಿರುದ್ಧ ಹೆಚ್. ವಿಶ್ವನಾಥ್ ಬಹಿರಂಗ ಅಸಮಾಧಾನ
Advertisement