ಹೈದರಾಬಾದ್: ಹುಟ್ಟುಹಬ್ಬದ ನಿಮಿತ್ತ ದೇವಸ್ಥಾನಕ್ಕೆ ತೆರಳುತ್ತಿದ್ದ 19 ವರ್ಷದ ಯುವತಿ ಮೇಲೆ ಕಾಮುಕರು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.
ತೆಲಂಗಾಣದ ಹನುಮಕೊಂಡ ನಗರದಲ್ಲಿ ಘಟನೆ ನಡೆದಿದ್ದು, ಹುಟ್ಟುಹಬ್ಬವಾದ್ದರಿಂದ ಯುವತಿ ಬುಧವಾರ ಬೆಳಗ್ಗೆ ಬೇಗ ಎದ್ದು ಸ್ನಾನ ಮಾಡಿ ದೇವರಿಗೆ ಪೂಜೆ ಸಲ್ಲಿಸಲು ದೇವಸ್ಥಾನಕ್ಕೆ ತೆರಳಿದ್ದಾಳೆ. ಈ ವೇಳೆ ಕಾಮುಕರು ಆಕೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ.
ಹಲವು ಗಂಟೆಗಳು ಕಳೆದರೂ ಯುವತಿ ಬಾರದ್ದರಿಂದ ಭಯಭೀತರಾಗಿ ಕರೆ ಮಾಡಿ ಸಂಪರ್ಕಿಸಲು ಯತ್ನಿಸಿದೆವು. ಆದರೆ ಅವಳ ಮೊಬೈಲ್ ಸ್ವಿಚ್ ಆಫ್ ಆಗಿತ್ತು ಎಂದು ಯುವತಿಯ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನೆಯಿಂದ ಎಚ್ಚತ್ತ ಯುವತಿಯ ಪೋಷಕರು, ಪೊಲೀಸ್ ಠಾಣೆಗೆ ತೆರಳಿ ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದಾರೆ. ತಕ್ಷಣ ಎಚ್ಚೆತ್ತ ಪೊಲೀಸರು ಯುವತಿಯನ್ನು ಹುಡುಕಲು ಪೊಲೀಸ್ ತಂಡ ರಚಿಸಿದ್ದಾರೆ. ತಡರಾತ್ರಿ ಯುವತಿಯ ದೇಹ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ವಾರಂಗಲ್‍ನ ಎಂಜಿಎಂ ಆಸ್ಪತ್ರೆಗೆ ಕಳುಹಿಸಲಾಗಿದೆ.
ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಸುಳಿವನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ತನಿಖಾಧಿಕಾರಿಗಳು ಸಂತ್ರಸ್ತೆಯ ಮೊಬೈಲ್ ಕರೆಯ ದಾಖಲೆಗಳು ಹಾಗೂ ಸಿಸಿಟಿವಿ ಫೂಟೇಜ್‍ಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.