ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಈ ಹಿನ್ನೆಲೆ ಬಿಸಿಲೆ -ಸುಬ್ರಹ್ಮಣ್ಯ (Bisile Subramanya) ಮಾರ್ಗದ ಸಂಚಾರ ಬಂದ್ ಆಗಿದೆ.
ಬಿಸಿಲೆಘಾಟ್ ಮಾರ್ಗದಲ್ಲಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ರಾಜ್ಯ ಹೆದ್ದಾರಿಗೆ ಮರ ಉರುಳಿ ಬಿದ್ದು ಸಂಚಾರ ಸ್ಥಗಿತವಾಗಿದೆ. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ‘ಕಾವೇರಿ’ ಶಾಕ್ – ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ
ದಾರಿ ಮಧ್ಯೆ ಸಿಲುಕಿ ನೂರಾರು ಪ್ರವಾಸಿಗರು ಪರದಾಡುವಂತಾಗಿದೆ. ಮಧ್ಯಾಹ್ನದಿಂದ ಸಾರಿಗೆ ಬಸ್‌ಗಳು ಹಾಗೂ ನೂರಾರು ವಾಹನಗಳು ನಿಂತಲ್ಲೇ ನಿಂತಿದ್ದು ಪ್ರಯಾಣಿಕರು ಹೈರಾಣಾಗಿದ್ದಾರೆ.
ಮರ ತೆರವು ಮಾಡುವಲ್ಲಿ ನಿರ್ಲಕ್ಷ್ಯ ವಿರುದ್ಧ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಭಾರೀ ಮಳೆ – 15 ವಿಮಾನಗಳ ಮಾರ್ಗ ಬದಲಾವಣೆ, ರಸ್ತೆಗಳಲ್ಲೂ ಟ್ರಾಫಿಕ್ ಜಾಮ್
