ಬೆಂಗಳೂರು: ಬಿಟ್ ಕಾಯಿನ್ (Bitcoin Case) ಪ್ರಕರಣದಲ್ಲಿ ಆರೋಪಿಗಳಿಗೆ ಸಹಾಯ ಮಾಡಿದ ಆರೋಪದಲ್ಲಿ ಡಿವೈಎಸ್‍ಪಿ ಶ್ರೀಧರ್ ಕೆ.ಪೂಜಾರ್ (Sridhar K. Pujar) ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ಹೈಕೋರ್ಟ್ (High Court of Karnataka) ರದ್ದುಪಡಿಸಿದೆ.
ಪ್ರಕರಣದ ವಿಚಾರಣೆಗೆ ಸಹಕರಿಸದೇ ತಲೆಮರೆಸಿಕೊಂಡ ಹಿನ್ನೆಲೆ ವಿಚಾರಣಾ ನ್ಯಾಯಾಲಯ ಘೋಷಿತ ಆರೋಪಿ ಎಂದು ವಾರೆಂಟ್ ಹೊರಡಿಸಿತ್ತು. ವಾರೆಂಟ್ ಪ್ರಶ್ನಿಸಿ ಅವರು ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಪೂಜಾರ್ ವಿರುದ್ಧದ ಘೋಷಿತ ಆರೋಪಿ ಆದೇಶವನ್ನು ರದ್ದು ಪಡಿಸಿದೆ. ಪೂಜಾರ್ ಅವರು ತನಿಖೆಗೆ ಸಹಕರಿಸುವುದಾಗಿ ಹಿರಿಯ ವಕೀಲ ಅರುಣ್ ಶ್ಯಾಮ್ ನ್ಯಾಯಾಲಯಕ್ಕೆ ವಿಚಾರಣೆ ವೇಳೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
Advertisement
Advertisement
ಬಳಿಕ ನ್ಯಾಯಾಲಯ, ಪೊಲೀಸರ ತನಿಖೆಗೆ ಆರೋಪಿ ಶ್ರೀಧರ್ ಕೆ. ಪೂಜಾರ್ ಸಹಕರಿಸಬೇಕು. ಮೇ 8ರ ಬೆಳಗ್ಗೆ 9ಕ್ಕೆ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು. ಆ ದಿನ ಸಂಜೆ 6ರ ವರೆಗೆ ಕಸ್ಟಡಿಗೆ ಪಡೆದು ತನಿಖೆ ನಡೆಸಬೇಕು. ಜಾಮೀನು ಅರ್ಜಿ ಸಲ್ಲಿಸಿದರೆ ಪೊಲೀಸರು ಆಕ್ಷೇಪಿಸಬಾರದು ಎಂದು ಆದೇಶಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಇಲ್ಲಿ ಸಾಯ್ತಿದ್ರೆ ಪಾಕ್ ಅಲ್ಲಿ ಅಳುತ್ತಿದೆ: ಮೋದಿ
Advertisement