ಬೆಂಗಳೂರು: ಬಿಟ್ ಕಾಯಿನ್ (Bitcoin) ಮರು ತನಿಖೆಗೆ ಎಸ್‍ಐಟಿ ರಚನೆ ವಿಚಾರದಲ್ಲಿ ತನಿಖೆಗೂ (Investigation) ಮೊದಲೇ ವಿಘ್ನ ಶುರುವಾಗಿದೆ. ತನಿಖಾ ತಂಡದ ಸದಸ್ಯರ ಹೆಸರನ್ನು ಕೈಬಿಟ್ಟು ಸರ್ಕಾರ ಆದೇಶ ಹೊರಡಿಸಿದೆ. ಎಸ್ಪಿ ಶರತ್ ಅವರನ್ನು ತನಿಖಾ ತಂಡದ ಸದಸ್ಯರ ಪಟ್ಟಿಯಿಂದ ಸರ್ಕಾರ ತೆರವು ಮಾಡಿದೆ.
ಈ ಹಿಂದೆ ಎಸ್ಪಿ ಶರತ್ ವಿರುದ್ಧ ಸಿಸಿಬಿ ತನಿಖಾಧಿಕಾರಿ ಶ್ರೀಧರ್ ಪೂಜಾರ್ ಮತ್ತು ಆಗಿನ ಕಮಿಷನರ್ ಕಮಲ್ ಪಂಥ್ ದೂರು ನೀಡಿದ್ದರು. ಎಸ್‍ಐಟಿ (SIT) ತಂಡ ರಚನೆಯಾದಾಗ ಅಧಿಕಾರಿಗಳಲ್ಲಿ ಸಾಕಷ್ಟು ಅಸಮಾಧಾನ ಸಹ ಇತ್ತು. ಈ ಬಗ್ಗೆ ದಾಖಲೆ ಸಮೇತ `ಪಬ್ಲಿಕ್ ಟಿವಿ’ ಸುದ್ದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ತನಿಖಾ ತಂಡದಿಂದ ಸರ್ಕಾರ ಆದೇಶ ಮಾಡಿದೆ. ಇದನ್ನೂ ಓದಿ: ಪೊಲೀಸ್ ಸಿಬ್ಬಂದಿಯಿಂದ ಕಿರುಕುಳ ಆರೋಪ – ಎಸ್ಪಿ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
Advertisement
Advertisement
ಬಿಟ್ ಕಾಯಿನ್ ಹಗರಣ ರಾಜ್ಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದರಲ್ಲಿ ಕೆಲವು ಪ್ರಭಾವಿ ರಾಜಕಾರಣಿಗಳು ಹಾಗೂ ಅಧಿಕಾರಿಗಳು ಕೈ ಜೋಡಿಸಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಈ ಹಗರಣದ ಸೂತ್ರಧಾರ ಎನ್ನಲಾಗಿದ್ದ ಅಂತಾರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದರು. ನಂತರ ಬಿಡುಗಡೆ ಮಾಡಿದ್ದರು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ಬಿಟ್ ಕಾಯಿನ್ ಹಗರಣದ ಮರು ತನಿಖೆಗೆ ಆದೇಶಿಸಿತ್ತು. ಇದನ್ನೂ ಓದಿ: ಜು.19 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ – ಲಕ್ಷ್ಮಿ ಹೆಬ್ಬಾಳ್ಕರ್
Advertisement
Web Stories