ಬೆಂಗಳೂರು: ಬಿಟ್ ಕಾಯಿನ್ (Bitcoin) ಹಗರಣ ಪ್ರಕರಣದಲ್ಲಿ ಆರೋಪಿಗಳಾಗಿರುವ ಹ್ಯಾಕರ್ ಶ್ರೀಕಿ (Hacker Sriki) ಹಾಗೂ ರಾಬಿನ್ ಖಂಡೇವಾಲ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು (Bail Plea) ಇ.ಡಿ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ (ED) ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಕೆಲ ತಿಂಗಳ ಹಿಂದೆ ಪ್ರಕರಣ ದಾಖಲಿಸಿಕೊಂಡು ಹಲವು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದರು. ಇದನ್ನೂ ಓದಿ: ಶ್ರಾವಣ ಶನಿವಾರ | ಬೆಟ್ಟದ ರಂಗನಾಥಸ್ವಾಮಿ ದರ್ಶನ ಪಡೆದ ಮಾಜಿ ಪ್ರಧಾನಿ ಹೆಚ್‌ಡಿಡಿ
ಈ ಪ್ರಕರಣದಲ್ಲಿ ಹ್ಯಾಕರ್ ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್, ಶ್ರೀಕಿ, ರಾಬಿನ್ ಖಂಡೇವಾಲ ಹಾಗೂ ಸುಖೇಶ್ ಹೆಗ್ಡೆ ಅವರ ನಿವಾಸಗಳ ಮೇಲೂ ಇ.ಡಿ ದಾಳಿ ನಡೆಸಿತ್ತು. ಇದನ್ನೂ ಓದಿ: ವೈಟ್‌ಫೀಲ್ಡ್ ಪೊಲೀಸರಿಗೆ ಹೈಕೋರ್ಟ್ ಮತ್ತೆ ತರಾಟೆ; ಎಸಿಪಿ, ಡಿಸಿಪಿ ಹಾಜರಾಗದಿದ್ರೆ ಆಯುಕ್ತರಿಗೆ ಸಮನ್ಸ್ ಜಾರಿ ಎಚ್ಚರಿಕೆ
ತನಿಖೆ ಪೂರ್ಣಗೊಳಿಸಿದ ಬಳಿಕ ಮೊಹಮ್ಮದ್ ನಲಪಾಡ್ ಸೇರಿದಂತೆ ಆರೋಪಿಗಳ ವಿರುದ್ಧ ಇ.ಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಚಾರ್ಜ್‌ಶೀಟ್ ಸಲ್ಲಿಕೆಯ ಕೆಲ ದಿನಗಳ ಬಳಿಕ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಕೋರಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ನೇಪಾಳಕ್ಕೆ ಮತ್ತೊಂದು ಮಹಾ ಅಪಾಯ! – ಯಾವ್ದೇ ಕ್ಷಣದಲ್ಲಾದ್ರೂ ಸ್ಫೋಟಿಸಬಹುದು ಸರೋವರ: ಚೀನಾ ಮತ್ತೆ ಎಚ್ಚರಿಕೆ
ಜಾಮೀನು ಅರ್ಜಿಗಳಿಗೆ ಇ.ಡಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಮಧು ಆರ್.ರಾವ್ ಆಕ್ಷೇಪಣೆ ಸಲ್ಲಿಸಿದ್ದರು. ಆರೋಪಿಗಳಿಗೆ ಜಾಮೀನು ನೀಡಬಾರದು ಎಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು. ಇದನ್ನೂ ಓದಿ: ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ
ವಾದ-ಪ್ರತಿವಾದ ಆಲಿಸಿದ ಇ.ಡಿ ವಿಶೇಷ ನ್ಯಾಯಾಲಯ ಇದೀಗ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಅವರ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದೆ. ಇದನ್ನೂ ಓದಿ: ಹನೂರು ಎನ್‌ಕೌಂಟರ್ ತನಿಖೆಗೆ CID ಎಂಟ್ರಿ – ನಾಲ್ಕು ವಿಶೇಷ ತಂಡಗಳ ರಚನೆ
