ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಶೋಕಾಚರಣೆ ಘೋಷಣೆಯಾಗಿದ್ದರೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಆದೇಶ ಉಲ್ಲಂಘಿಸಿ ಸಂವಿಧಾನ ಸಂಭಾಷಣೆ ಎಂಬ ಕಾರ್ಯಕ್ರಮ ಆಯೋಜಿಸಿ ಶ್ರೀಗಳಿಗೆ ಅಗೌರವ ತೋರಿದ್ದರು. ಅಲ್ಲದೇ ಮಾಧ್ಯಮಗಳನ್ನು ಟೆರರಿಸ್ಟ್ ಗಳಿಗಿಂತ ಡೇಂಜರ್ ಎಂದು ವಿವಾದತ್ಮಾಕ ಹೇಳಿಕೆ ನೀಡಿದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ.
ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬಿಜೆಪಿ ಮುಖಂಡರಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಸಿಎಂ ಕುಮಾರಸ್ವಾಮಿ ಅವರು ಕೂಡಲೇ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಬೇಕೆಂದು ಆಗ್ರಹಿಸಿದರು. ಇದನ್ನು ಓದಿ: ಸರ್ಕಾರಿ ಆದೇಶ ಉಲ್ಲಂಘಿಸಿದ ಸತ್ಯ ಹೇಳಿದ್ದಕ್ಕೆ ಪ್ರಿಯಾಂಕ್ ಖರ್ಗೆ ಮಾಧ್ಯಮಗಳ ಮೇಲೆ ಗರಂ!
Advertisement
Advertisement
ಇತ್ತ ಯಾದಗಿರಿಯಲ್ಲಿ ಬಿಜೆಪಿ ಮುಖಂಡ ಖಂಡಪ್ಪ ದಾಸನ್, ಪ್ರಿಯಾಂಕ್ ಖರ್ಗೆ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವ ಪ್ರಿಯಾಂಕ್ ಖರ್ಗೆ ಅವರು ಪಿಯುಸಿ ಫೇಲ್ ಆಗಿದ್ದು, ಆತನಿಗೆ ಸಂವಿಧಾನ ಗೊತ್ತಿಲ್ಲ ಎಂದು ಆರೋಪಿಸಿದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸಿದರು. ಬೀದರ್, ಚಿತ್ರದುರ್ಗದಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಧಾರವಾಡದಲ್ಲಿ ಕೂಡಾ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಸಚಿವರ ರಾಜೀನಾಮೆಗೆ ಒತ್ತಾಯಿಸಿದರು.
Advertisement
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv