ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ

Public TV
1 Min Read
Mehbooba Mufti

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರಕ್ಕೆ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಆರೋಪಿಸಿದರು.

the kashmir files 4

ಸರ್ಕಾರಿ ನೌಕರಾಗಿದ್ದ ಕಾಶ್ಮೀರಿ ಪಂಡಿತ್ ರಾಹುಲ್ ಭಟ್ ಹತ್ಯೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವು ನನ್ನ ಅಧಿಕಾರಾವಧಿಯಲ್ಲಿ ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿತ್ತು. 2016 ರಲ್ಲಿ ಈ ರೀತಿಯ ಯಾವುದೇ ಹತ್ಯೆ ನಡೆದಿಲ್ಲ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಈ ರೀತಿಯ ಹಿಂಸಾಚಾರವನ್ನು ಪ್ರಚೋದಿಸಿದೆ ಎಂದು ಆಕ್ರೋಶ ಹೊರಹಾಕಿದರು. ಈ ವೇಳೆ ಮುಫ್ತಿ ಅವರು ದೇಶದಲ್ಲಿ ದ್ವೇಷದ ವಾತಾವರಣವನ್ನು ಸೃಷ್ಟಿಸಿದ ‘ದಿ ಕಾಶ್ಮೀರ ಫೈಲ್ಸ್’ ಸಿನಿಮಾವನ್ನು ಬ್ಯಾನ್ ಮಾಡಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್ 

Gyanvapi Masjid 1

ಜ್ಞಾನವಾಪಿ ಮಸೀದಿಯ ವಿಷಯ ಕುರಿತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಮಾತನಾಡಿದ ಅವರು, ನಿಜವಾದ ಸಮಸ್ಯೆಗಳನ್ನು ದೂರವಿಡಲು ಹಿಂದೂ-ಮುಸ್ಲಿಂ ಸಮಸ್ಯೆಗಳನ್ನು ಸೃಷ್ಟಿಸಲಾಗುತ್ತಿದೆ. ಈಗ ಜ್ಞಾನವಾಪಿ ಮಸೀದಿ ಸಮಸ್ಯೆ ಹಿಂದೆ ಇದ್ದಾರೆ. ನಾವು ಪೂಜಿಸುವುದೆಲ್ಲ ನಮ್ಮ ದೇವರು. ನೀವು ನೋಡುತ್ತಿರುವ ಎಲ್ಲ ಮಸೀದಿಗಳ ಪಟ್ಟಿಯನ್ನು ನಮಗೆ ನೀಡಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಪಠ್ಯಕ್ರಮದಲ್ಲಿ RSS ಸಂಸ್ಥಾಪಕ ಹೆಡ್ಗೆವಾರ್ ಭಾಷಣ ಸೇರ್ಪಡೆ – ಶೀಘ್ರವೇ ಹಿಂತೆಗೆಯಲು ಕ್ಯಾಂಪಸ್ ಫ್ರಂಟ್ ಒತ್ತಾಯ 

Share This Article
Leave a Comment

Leave a Reply

Your email address will not be published. Required fields are marked *