ಬೆಂಗಳೂರು: ಹಿಜಬ್ ವಿವಾದ ದಿನೇ ದಿನೇ ರಾಜ್ಯಾದ್ಯಂತ ಪಸರಿಸುತ್ತಿದ್ದು, ಈ ವಿವಾದ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದೆ. ಉಡುಪಿ ಹಾಗೂ ಕುಂದಾಪುರದ ವಿದ್ಯಾರ್ಥಿನಿಯರನ್ನು ಹಿಜಬ್ ವಿವಾದಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಸರಣಿ ಟ್ವೀಟ್ ಮಾಡಿದೆ.
ಟ್ವೀಟ್‌ನಲ್ಲಿ ಏನಿದೆ?: ರಾಜ್ಯದಲ್ಲಿ ಹಿಜಬ್ ವಿವಾದ ಸೃಷ್ಟಿಯಾಗುವುದರ ಹಿಂದೆ ವ್ಯವಸ್ಥಿತ ಷಡ್ಯಂತ್ರವಿದ್ದು, ಉಡುಪಿ, ಕುಂದಾಪುರದ ವಿದ್ಯಾರ್ಥಿನಿಯರನ್ನು ಈ ವಿವಾದಕ್ಕೆ ಬಳಸಿಕೊಳ್ಳಲಾಗುತ್ತಿದೆ. ಈಗ ರಾಜ್ಯಕ್ಕೆ ಪಸರಿಸುವ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಧಾರ್ಮಿಕ ಮೂಲಭೂತವಾದದ ಪ್ರವೇಶ ಎಷ್ಟು ಸರಿ ಎಂದು ಬಿಜೆಪಿ ಪ್ರಶ್ನಿಸಿದೆ.
Advertisement
ಉಡುಪಿ, ಕುಂದಾಪುರಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೆ ವ್ಯಾಪಿಸಿದೆ. ಕೋರ್ಟ್ ಮೆಟ್ಟಿಲೇರಿದೆ.
ಈ ವಿವಾದವನ್ನು ತನ್ನ ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹವಣಿಸುತ್ತಿದೆ. ನೆರೆಮನೆಗೆ ಬೆಂಕಿ ಬಿದ್ದಾಗ ಮೈ ಕಾಯಿಸಿಕೊಳ್ಳುವ ಬುದ್ಧಿ ತೋರುತ್ತಿದೆ.#YesToUniform_NoToHijab
— BJP Karnataka (@BJP4Karnataka) February 8, 2022
Advertisement
ಉಡುಪಿ, ಕುಂದಾಪುರಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಈಗ ರಾಜ್ಯದ ಇತರೆ ಜಿಲ್ಲೆಗಳಿಗೆ ವ್ಯಾಪಿಸಿದೆ. ಕೋರ್ಟ್ ಮೆಟ್ಟಿಲೇರಿದೆ. ಈ ವಿವಾದವನ್ನು ತನ್ನ ಮತಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಹವಣಿಸುತ್ತಿದೆ. ಈ ಮೂಲಕ ನೆರೆಮನೆಗೆ ಬೆಂಕಿ ಬಿದ್ದಾಗ ಮೈಕಾಯಿಸಿಕೊಳ್ಳುವ ಬುದ್ಧಿ ತೋರುತ್ತಿದೆ ಎಂದು ಕಿಡಿಕಾರಿದೆ.
Advertisement
ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು.
ಮುಸ್ಲಿಂ ಮಹಿಳೆಯರ ಹಕ್ಕಿನ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರಿಗೆ, ಇದೇ ಮಹಿಳೆಯರು ತ್ರಿವಳಿ ತಲಾಖ್‌ನಿಂದ ಎದುರಿಸುವ ದೌರ್ಜನ್ಯದ ಬಗ್ಗೆ ಏಕೆ ಮೌನವಾಗಿದ್ದಾರೆ?#YesToUniform_NoToHijab
— BJP Karnataka (@BJP4Karnataka) February 8, 2022
Advertisement
ಹಿಜಾಬ್ ಪ್ರಕರಣದ ದುರುದ್ದೇಶ, ಜಾತ್ಯತೀತ ಹೆಸರಿನಲ್ಲಿನ ಮುಖವಾಡ ಎರಡೂ ಕಳಚಿ ಬೀಳುವ ಸಮಯವಿದು. ಮುಸ್ಲಿಂ ಮಹಿಳೆಯರ ಹಕ್ಕಿನ ಬಗ್ಗೆ ಭಾಷಣ ಮಾಡುವ ಕಾಂಗ್ರೆಸ್ ನಾಯಕರಿಗೆ, ಇದೇ ಮಹಿಳೆಯರು ತ್ರಿವಳಿ ತಲಾಖ್‌ನಿಂದ ಎದುರಿಸುವ ದೌರ್ಜನ್ಯದ ಬಗ್ಗೆ ಏಕೆ ಮೌನವಾಗಿದ್ದಾರೆ? ಹಿಜಾಬ್ ವಿವಾದದ ಹಿಂದೆ ಎಸ್‌ಡಿಪಿಐ ಕೈವಾಡ ಇದೆ ಎಂದು ಡಿಕೆ ಶಿವಕುಮಾರ್ ಹೇಳುತ್ತಾರೆ.
ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹಳಹಳಿಕೆ ಹಿಜಾಬ್ ವಿವಾದದ ಹಿಂದೆ ಇದೆ.
ರಾಹುಲ್ ಗಾಂಧಿಯಂತಹ ವಿಫಲ ನಾಯಕರು ಕೂಡಾ ಇದನ್ನು ಬೆಂಬಲಿಸುತ್ತಾರೆ ಎಂದರೆ ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿದೆಯೇ?#YesToUniform_NoToHijab
— BJP Karnataka (@BJP4Karnataka) February 8, 2022
ಆದರೆ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರು ಪತ್ರಿಕಾಗೋಷ್ಠಿ ನಡೆಸಿ ಈ ವಿವಾದಕ್ಕೆ ಪ್ರೇರಣೆ ನೀಡುತ್ತಾರೆ. ಹಿಜಾಬ್ ಮೂಲಭೂತ ಹಕ್ಕು ಎಂದು ಪ್ರತಿಪಾದಿಸುತ್ತಾರೆ. ಹಾಗಾದರೆ ಇವರ ಉದ್ದೇಶವೇನು? ವಿದ್ಯಾರ್ಥಿಗಳಲ್ಲಿ ಮತೀಯವಾದವನ್ನು ಬಲವಂತವಾಗಿ ಹೇರುವ ಮೂಲಭೂತವಾದಿಗಳ ಹತಾಶೆಯ ಹಳಹಳಿಕೆ ಹಿಜಾಬ್ ವಿವಾದದ ಹಿಂದೆ ಇದೆ. ರಾಹುಲ್ ಗಾಂಧಿಯಂತಹ ವಿಫಲ ನಾಯಕರು ಕೂಡಾ ಇದನ್ನು ಬೆಂಬಲಿಸುತ್ತಾರೆ. ಇದು ಕಾಂಗ್ರೆಸ್ ಪ್ರಾಯೋಜಿತ ನಾಟಕ ಎಂಬುದರಲ್ಲಿ ಅನುಮಾನವಿದೆಯೇ? ಎಂದು ವಾಗ್ದಾಳಿ ನಡೆಸಿದೆ. ಇದನ್ನೂ ಓದಿ: ಧಮ್ ಇದ್ರೆ ಮಸೀದಿಗೆ ಮುಸ್ಲಿಂ ಮಹಿಳೆಗೆ ಪ್ರವೇಶ ಕೊಡಿಸಿ- ಶಾಸಕಿಗೆ ಈಶ್ವರಪ್ಪ ಸವಾಲು
1983 ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಲಾಗಿದೆ.
ಆದರೆ @siddaramaiah ಅವರು ಹಿಜಾಬ್ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು.#YesToUniform_NoToHijab
— BJP Karnataka (@BJP4Karnataka) February 8, 2022
1983ರ ಶಿಕ್ಷಣ ಕಾಯ್ದೆಯ ಪ್ರಕಾರ ರಾಜ್ಯದಲ್ಲಿ ಸಮವಸ್ತç ಕಡ್ಡಾಯಗೊಳಿಸಲಾಗಿದೆ. ಆದರೆ ಸಿದ್ದರಾಮಯ್ಯ ಅವರು ಹಿಜಾಬ್ ಒಳಗಿರುವ ಮತ ಪಡೆಯಲು ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎನ್ನುತ್ತಾರೆ. ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ಅವಾಂತರಗಳಿಗೆ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರು ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ. ಇದನ್ನೂ ಓದಿ: ಶಿವಮೊಗ್ಗದಲ್ಲಿ ಭುಗಿಲೆದ್ದ ಹಿಜಬ್-ಕೇಸರಿ ವಿವಾದ- ರಾಷ್ಟ್ರಧ್ವಜ ಹಾರಿಸುವಲ್ಲಿ ಭಗವಾನ್ ಧ್ವಜ ಹಾರಿಸಿದ ವಿದ್ಯಾರ್ಥಿಗಳು