ಹುಬ್ಬಳ್ಳಿ: ನಗರದಲ್ಲಿ ವಿವಾದಿತ ಜಾಗಕ್ಕೆ ಸಂಬಂಧಿಸಿದಂತೆ ರಾಜಕೀಯ ಜಟಾಪಟಿ ಜೋರಾಗಿದೆ. ಹುಬ್ಬಳ್ಳಿಯ (Hubballi) ಹೃದಯ ಭಾಗದಲ್ಲಿರುವ 50 ಕೋಟಿಗೂ ಅಧಿಕ ಮೌಲ್ಯದ ಜಾಗವನ್ನ ಕಾಂಗ್ರೆಸ್ (Congress) ಕಬ್ಜಾ ಮಾಡಿಕೊಂಡಿದೆ ಎಂದು ಕೈ ಮುಖಂಡರು ಆರೋಪಿಸಿದ್ದಾರೆ.
ಕಾಂಗ್ರೆಸ್ ಮುಖಂಡರು ವಿವಾದಿತ ಜಾಗದಲ್ಲಿ ಪಕ್ಷದ ಕಚೇರಿ ಮಾಡಲು ಕಬ್ಜಾ ಮಾಡಿಕೊಂಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಬೋರ್ಡ್ ಹಾಕಿ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಅದಕ್ಕಾಗಿ ಇತ್ತೀಚೆಗೆ ಪಹಣಿಯಲ್ಲಿ ಕಾಂಗ್ರೆಸ್ ಪಕ್ಷದ ಹೆಸರನ್ನು ನಮೂಡಿಸಿಕೊಂಡಿದ್ದಾರೆ ಎಂಬುದಾಗಿಯೂ ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
ಕಬ್ಜಾ ಮಾಡಿಕೊಂಡ ಸ್ಥಳಕ್ಕೆ ಜಿಲ್ಲಾಧ್ಯಕ್ಷ ಹಲ್ತಾಫ್ ಹಳ್ಳೂರ ನೇತೃತ್ವದಲ್ಲಿ ರಾತ್ರೋ ರಾತ್ರಿ ರೆಡಿಮೇಡ್ ಕಾಂಪೌಂಡ್ ನಿರ್ಮಾಣ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡರು ತೀವ್ರ ವಾಗ್ದಾಳಿ ನಡೆಸಿದ್ದಾರೆ.
ವಿವಾದಿತ ಜಾಗ ಈ ಮೊದಲು 1959 ರಲ್ಲಿ ಕಾಂಗ್ರೆಸ್ ಪಕ್ಷದ ಹೆಸರಿಗೆ ಸೆಲ್ ಡಿಡ್ ಆಗಿತ್ತು. ನಂತರ ಎಸ್.ಆರ್ ಬೊಮ್ಮಾಯಿ ಕಾಲದಲ್ಲಿ ಜೆಡಿ(ಯು) ಕಚೇರಿಯಾಗಿ ಮಾರ್ಪಾಡು ಆಗಿತ್ತು. ಇದೀಗ ಕಾಂಗ್ರೆಸ್ ಮತ್ತೆ ತಮ್ಮ ತೆಕ್ಕೆಗೆ ತೆಗೆದುಕೊಳ್ಳೋದಕ್ಕೆ ಮುಂದಾಗಿದೆ.