– ವಿಪಕ್ಷಗಳ ಸಭೆಯಿಂದ ರಾಜಕೀಯ ಲಾಭ ಆಗಲ್ಲ – ಮಾಜಿ ಸಿಎಂ ಟೀಕೆ
ಹುಬ್ಬಳ್ಳಿ: ಜೆಡಿಎಸ್ (JDS) ಜೊತೆ ಮೈತ್ರಿ ನಮ್ಮ ವರಿಷ್ಠರಿಗೆ ಬಿಟ್ಟಿದ್ದು. ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ನಡುವೆ ಮಾತುಕತೆಯಾಗಿದೆ. ಈಗಾಗಲೇ ಕುಮಾರಸ್ವಾಮಿಯವರೂ (HD Kumaraswamy) ಕೆಲವೊಂದಿಷ್ಟು ಭಾವನೆಗಳನ್ನ ವ್ಯಕ್ತಪಡಿಸಿದ್ದಾರೆ. ಮಾತುಕತೆ ಫಲಶೃತಿ ಆಧಾರದ ಮೇಲೆ ಮುಂದಿನ ರಾಜಕೀಯ ಬೆಳವಣಿಗೆ ನಡೆಯುತ್ತದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.
Advertisement
ಜೆಡಿಎಸ್ ಜೊತೆಗೆ ಬಿಜೆಪಿ (BJP) ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿ ಹುಬ್ಬಳ್ಳಿಯಲ್ಲಿ (Hubballi) ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ. ಪ್ರತಿ ಪಕ್ಷಗಳು ಇಡೀ ಭಾರತದಲ್ಲಿ ಶಕ್ತಿಯುತವಾಗಿಲ್ಲ. ಪ್ರತಿ ಪಕ್ಷಗಳಲ್ಲಿ ಪ್ರಾದೇಶಿಕ ಪಕ್ಷಗಳೇ ಹೆಚ್ಚಿವೆ. ಅವು ಆಯಾ ರಾಜ್ಯಗಳಲ್ಲಿ ಪ್ರತಿಪಕ್ಷಗಳಾಗಿ ಕೆಲಸ ಮಾಡುತ್ತಿವೆ. ಒಕ್ಕೂಟ ರಚನೆಯಿಂದ, ಜುಲೈ 17, 18ರಂದು ನಡೆಯುವ ಪ್ರತಿಪಕ್ಷ ಸಭೆಯಿಂದ ಯಾವುದೇ ರಾಜಕೀಯ ಲಾಭ ಆಗುವುದಿಲ್ಲ ಎಂದು ಹೇಳಿದ್ದಾರೆ.
Advertisement
Advertisement
ಮೋದಿಯವರನ್ನ (Narendra Modi) ಸೋಲಿಸಬೇಕೆಂದು ಒಗ್ಗಟ್ಟಾಗುತ್ತಿದ್ದಾರೆ, ಅದು ಸಾಧ್ಯವೇ ಇಲ್ಲ. ಪ್ರತಿ ಪಕ್ಷಗಳಿಗೆ ಸ್ವಂತ ಬಲವಿಲ್ಲ, ನಿರ್ದಿಷ್ಟ ಕಾರ್ಯಕ್ರಮಗಳೂ ಇಲ್ಲ. ಭಾರತ ದೇಶವಿಂದು ಜಗತ್ತಿನಲ್ಲಿ ಆರ್ಥಿಕ ಮತ್ತು ಸಾಮಾಜಿಕ ಸದೃಢ ರಾಷ್ಟ್ರವಾಗಿದೆ. ಇದರ ಕೀರ್ತಿ ಮೋದಿ ಅವರಿಗೆ ಸಲ್ಲುತ್ತಿದೆ ಎಂದು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಆಷಾಢ ಬಳಿಕ ಸಿದ್ದರಾಮಯ್ಯ ಮನೆ ಶಿಫ್ಟ್ ವಿಚಾರ – ಮೂಢನಂಬಿಕೆಯ ಕಾಳಜಿಗಳು ಏಕೆ ಬೇಕು; ನಟ ಚೇತನ್ ಪ್ರಶ್ನೆ
Advertisement
ವಿಪಕ್ಷ ನಾಯಕರ ಸ್ಥಾನ 18ರ ನಂತ್ರ ಘೋಷಣೆ ಆಗಬಹುದು ಎಂಬ ಮಾಹಿತಿ ಇದೆ. ಸೋಮಣ್ಣ (V Somanna) ಕಾಂಗ್ರೆಸ್ ಸೇರ್ಪಡೆ ಕೇವಲ ಉಹಾಪೋಹ. ಗೃಹಲಕ್ಷ್ಮಿ ಎಡವಟ್ಟಾಗಿದೆ. ದಿನದಿಂದ ದಿನಕ್ಕೆ ಯೋಜನೆಯನ್ನ ಮುಂದೂಡುತ್ತಿದ್ದಾರೆ. ಇನ್ನೂ ಅದಕ್ಕೆ ನಿರ್ದಿಷ್ಟ ನಿಯಮಗಳನ್ನ ಮಾಡುತ್ತಿಲ್ಲ. ಸಂಪೂರ್ಣವಾಗಿ ಅನುಷ್ಠಾನ ಮಾಡುವ ಉದ್ದೇಶವೂ ಸರ್ಕಾರಕ್ಕಿಲ್ಲ. ದಿನಾಂಕ ಮುಂದೂಡಿ ಕೆಲವರಿಗೆ ಮಾತ್ರ ಯೋಜನೆ ಪ್ರಾರಂಭ ಮಾಡುವ ಉದ್ದೇಶ ಸರ್ಕಾರಕ್ಕಿದೆ. ತಾಯಂದಿರಿಗೆ, ರಾಜ್ಯದ ಹೆಣ್ಣುಮಕ್ಕಳಿಗೆ ಭ್ರಮನಿರಸನ ಮಾಡುವಂತ ಉದ್ದೇಶ ಈ ಯೋಜನೆಯದ್ದಾಗಿದೆ. ಅಧಿವೇಶನದಲ್ಲಿ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇನ್ನು 5 ತಿಂಗಳಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಪತನ – ಬಿಜೆಪಿ ಭವಿಷ್ಯ
Web Stories