ನವದೆಹಲಿ: ಬಿಜೆಪಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ವಿರೋಧಿಸುತ್ತಲೇ ಇದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಆರೋಪಿಸಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್ ನಿರ್ದಿಷ್ಟ ಧರ್ಮವೊಂದರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವುದನ್ನು ನಾನೂ ಖಂಡಿಸುತ್ತೇನೆ. ಜನರು ಕಾನೂನನ್ನು ಕೈಗೆತ್ತಿಕೊಳ್ಳುವುದು ಬೇಡ ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ ಭೂಮಿಯಲ್ಲಿ ವಾಯಸೇನೆ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್ – ಓಡೋಡಿ ಬಂದ ಜನ
Advertisement
I condemn the comments made by BJP MLA. BJP doesn't want to see that there is peace in Hyderabad. BJP hates Prophet Muhammad and Muslims. They want to destroy the social fabric of India: AIMIM chief Asaduddin Owaisi on comments made by Telangana BJP MLA Raja Singh pic.twitter.com/Lf8kjO1gWt
— ANI (@ANI) August 23, 2022
Advertisement
ಹೈದರಾಬಾದ್‌ನಲ್ಲಿ ಶಾಂತಿ ನೆಲೆಸಿರುವುದು ಬಿಜೆಪಿಯವರಿಗೆ ಇಷ್ಟವಿಲ್ಲ. ಬಿಜೆಪಿಯವರು ನಿರಂತರವಾಗಿ ಪ್ರವಾದಿ ಮೊಹಮ್ಮದ್ ಹಾಗೂ ಮುಸ್ಲಿಮರನ್ನು ದ್ವೇಷಿಸುತ್ತಲೇ ಇದ್ದಾರೆ. ಭಾರತದ ಸಾಮಾಜಿಕ ವ್ಯವಸ್ಥೆಯನ್ನೇ ನಾಶಮಾಡಲು ಬಯಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಡಿಕೇರಿ ಚಲೋ ಕೈಬಿಟ್ಟ ಕಾಂಗ್ರೆಸ್ ನಿಲುವು ಸ್ವಾಗತಿಸಿದ ಮಾಜಿ ಸಿಎಂ ಬಿಎಸ್‍ವೈ
Advertisement
Advertisement
ಕೆಲ ದಿನಗಳ ಹಿಂದೆಯಷ್ಟೇ ಪ್ರವಾದಿ ಮೊಹಮ್ಮದ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಮುಂದಿನ ದಿನಗಳಲ್ಲಿ ದೆಹಲಿ ಸಿಎಂ ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧಿಸಬಹುದು. ಮುಸ್ಲಿಮರನ್ನು ನಿಂದಿಸುವವರಿಗೆ ಬಿಜೆಪಿ ಪಕ್ಷದಲ್ಲಿ ದೊಡ್ಡ ಹುದ್ದೆಗಳು ಸಿಗುತ್ತವೆ. ಹಾಗಾಗಿ ನೂಪುರ್ ಶರ್ಮಾ ಅವರನ್ನು ದೆಹಲಿಯ ಸಿಎಂ ಅಭ್ಯರ್ಥಿಯನ್ನಾಗಿ ಮಾಡುವುದರಲ್ಲಿ ಅಚ್ಚರಿ ಇಲ್ಲ ಎಂದು ಓವೈಸಿ ಟೀಕಿಸಿದ್ದರು.
ಇತ್ತೀಚೆಗೆ ಹೈದರಾಬಾದ್‌ನಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನವ್ವರ್ ಫಾರೂಕಿ ನಡೆಸಿಕೊಟ್ಟಿದ್ದ ಕಾರ್ಯಕ್ರಮವೊಂದರ ಬಗ್ಗೆ ಟೀಕಿಸಿ ರಾಜಾ ಸಿಂಗ್ ನಿನ್ನೆ ವೀಡಿಯೋ ತುಣುಕೊಂದನ್ನು ಬಿಡುಗಡೆ ಮಾಡಿದ್ದರು. ಅದರಲ್ಲಿ ಧರ್ಮದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವಿಚಾರವಾಗಿ ರಾಜಾ ಸಿಂಗ್ ವಿರುದ್ಧ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆದಿತ್ತು. ಸಿಂಗ್ ಅವರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.
ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ರಾಜಾ ಸಿಂಗ್ ಅವರನ್ನು ತೆಲಂಗಾಣ ಪೊಲೀಸರು ಬಂಧಿಸಿದ್ದಾರೆ.