ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಕೊಟ್ಟಿದ್ದಾರೆ. ಎರಡೂವರೆ ವರ್ಷದ ಮಹಾ ಆಘಾಡಿ ಸರ್ಕಾರ ಪತನಗೊಂಡಿದೆ.
ಬುಧವಾರ ಸುಪ್ರೀಂಕೋರ್ಟ್‍ನಲ್ಲಿ ಸುದೀರ್ಘ ವಾದ-ಪ್ರತಿವಾದ ನಡೀತು. ಆದರೆ ವಿಶ್ವಾಸಮತ ಸಾಬೀತಿಗೆ ಸುಪ್ರೀಂಕೋರ್ಟ್ ಸೂಚಿಸಿತು. ಇದರಿಂದ ಸೋಲೊಪ್ಪಿಕೊಂಡ ಉದ್ಧವ್ ಠಾಕ್ರೆ ಇವತ್ತಿನ ವಿಶ್ವಾಸಮತಕ್ಕೂ ಮುನ್ನ ನಿನ್ನೆ ರಾತ್ರಿಯೇ ರಾಜೀನಾಮೆ ಘೋಷಿಸಿದ್ರು. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್ ಠಾಕ್ರೆ ರಾಜೀನಾಮೆ
Advertisement
Mumbai | Uddhav Thackeray offered prayers at a temple with sons Aaditya and Tejas after submitting his resignation as Maharashtra CM to Governor Bhagat Singh Koshyari pic.twitter.com/QyMy5Ehshf
— ANI (@ANI) June 29, 2022
Advertisement
ಫೇಸ್‍ಬುಕ್‍ನಲ್ಲಿ ಲೈವ್ ಬರುವ ಮೂಲಕ ತಮ್ಮ ರಾಜೀನಾಮೆ ಘೋಷಿಸಿದ ಠಾಕ್ರೆ, ವಿಧಾನ ಪರಿಷತ್ ಸ್ಥಾನಕ್ಕೂ ರಾಜೀನಾಮೆ ಕೊಡುತ್ತಿರುವುದಾಗಿ ಹೇಳಿದ್ರು. ಸೋನಿಯಾ, ಶರದ್ ಪವಾರ್‍ಗೆ ಧನ್ಯವಾದ ತಿಳಿಸಿದ್ರು. ಬಳಿಕ ರಾಜಭವನಕ್ಕೆ ಖುದ್ದು ಕಾರು ಚಲಾಯಿಸಿಕೊಂಡು ಹೋಗಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ್ರು. ರಾಜ್ಯಪಾಲರು ಠಾಕ್ರೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಈ ವೇಳೆ ಠಾಕ್ರೆಗೆ ಇಬ್ಬರು ಮಕ್ಕಳಾದ ಆದಿತ್ಯ, ತೇಜಸ್ ಸಾಥ್ ನೀಡಿದ್ರು.
Advertisement
#WATCH Mumbai | Uddhav Thackeray submits his resignation as Maharashtra CM to Governor Bhagat Singh Koshyari, who has asked him to continue as CM until an alternate arrangement is made: Raj Bhavan pic.twitter.com/lmEzl8ghBY
— ANI (@ANI) June 29, 2022
Advertisement
ರಾಜೀನಾಮೆ ಬಳಿಕ ಮಳೆಯಲ್ಲೂ ದೇಗುಲಕ್ಕೆ ಠಾಕ್ರೆ ಭೇಟಿ ನೀಡಿದ್ರು. ಇತ್ತ ಶಿಂಧೆ ಬಣದೊಂದಿಗೆ ಮಹಾರಾಷ್ಟ್ರದಲ್ಲೂ ಕಮಲ ಅರಳುವುದು ಬಹುತೇಕ ಪಕ್ಕಾ ಆಗಿದೆ. ಠಾಕ್ರೆ ರಾಜೀನಾಮೆ ನೀಡುತ್ತಿದ್ದಂತೆ ಫಡ್ನವೀಸ್‍ಗೆ ಸಿಹಿ ತಿನ್ನಿಸಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ರು. ಶಿಂಧೆ ದೂರವಾಣಿ ಮೂಲಕ ಫಡ್ನವೀಸ್ ಜೊತೆ ಮಾತಾಡಿದ್ರು.
#WATCH Mumbai | Uddhav Thackeray after submitting his resignation as Maharashtra CM to Governor visited a temple along with his son Aaditya Thackeray pic.twitter.com/GvpR0QIKSd
— ANI (@ANI) June 29, 2022
ಇಂದು ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸೋ ಸಾಧ್ಯತೆಗಳಿವೆ. ಜುಲೈ 1ಕ್ಕೆ ರೆಬೆಲ್ಸ್ ಬೆಂಬಲಿತ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವ ನಿರೀಕ್ಷೆ ಇದೆ. ಇತ್ತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿಗೆ ಹೈಕಮಾಂಡ್ ಮುಂಬೈಗೆ ಬರುವಂತೆ ಬುಲಾವ್ ನೀಡಿದೆ. ರವಿ ಮಹಾರಾಷ್ಟ್ರ, ಗೋವಾ, ತಮಿಳನಾಡಿನಲ್ಲಿ ಪಕ್ಷದ ಉಸ್ತುವಾರಿ ಆಗಿದ್ದಾರೆ.