ಎಚ್‍ಡಿಕೆ ರಾಜಕೀಯ ಜೀವನವೇ ಒಂದು ಡ್ರಾಮಾ, ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ: ಬಿಜೆಪಿ ಕಿಡಿ

Public TV
1 Min Read
BJP AND HDK

ಬೆಂಗಳೂರು: ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಕುಮಾರಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಿಡಿ ಕಾರಿದೆ.

BJP FLAG

ಟ್ವೀಟ್‍ನಲ್ಲಿ ಏನಿದೆ?
ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಕುಮಾರಸ್ವಾಮಿ ಅವರ ರಾಜಕೀಯ ವರಸೆ. ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ “ಪುರುಷಾರ್ಥ” ಅಡಗಿದೆಯೇ? ಮಾನ್ಯ ಕುಮಾರಸ್ವಾಮಿ ಅವರೇ. ಇದನ್ನೂ ಓದಿ: ಯುಗಾದಿ ನಿಮ್ಮ ಜೀವನದಲ್ಲಿ ಉತ್ಸಾಹ, ಸ್ಪೂರ್ತಿ ತರಲಿ – ದೇಶದ ಜನತೆಗೆ ಮೋದಿ ವಿಶ್

HD KUMARASWAMY 2

ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ. ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಇದನ್ನೂ ಓದಿ: ಕರ್ನಾಟಕ ನಮ್ಮದು, ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ದ್ರೋಹಿಗಳದ್ದಲ್ಲ: ಎಚ್‌ಡಿಕೆ

ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ. ಉಪಸಭಾಪತಿಯ ಕುರ್ಚಿಗೆ ಗಂಟುಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್ ತ್ಯಜಿಸಿ ಜೆಡಿಎಸ್ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಎಚ್‍ಡಿಕೆ ಸರ್ಕಸ್ ಮಾಡುತ್ತಿದ್ದಾರೆ. ಕುರ್ಚಿಗಾಗಿ ಮಾತುಮುರಿದು ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ?.

Share This Article
Leave a Comment

Leave a Reply

Your email address will not be published. Required fields are marked *