ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಆರೋಗ್ಯ ವಿಚಾರಿಸಿದ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು

Public TV
1 Min Read
Baburao Chinchansur 2

ಯಾದಗಿರಿ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಬುರಾವ್ ಚಿಂಚನಸೂರ್ (Baburao Chinchansur) ಅವರನ್ನು ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಅಭ್ಯರ್ಥಿಗಳು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

baburao chinchansur

ಗುರುಮಠಕಲ್ (Gurumitkal) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿಯಾಗಿರುವ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಪ್ರಚಾರ ಕಾರ್ಯ ಮುಗಿಸಿ, ಕಲಬುರಗಿಗೆ (Kalaburagi) ವಾಪಸ್ ಹೋಗುತ್ತಿದ್ದಾಗ ಶುಕ್ರವಾರ ತಡರಾತ್ರಿ ಕಾರು ಅಪಘಾತವಾಗಿತ್ತು. ಪರಿಣಾಮ ಚಿಂಚನಸೂರ್ ಅವರಿಗೆ ತೀವ್ರ ಗಾಯಗಳಾಗಿತ್ತು. ಅವರ ತಲೆ ಹಾಗೂ ಕಾಲಿನ ಭಾಗಕ್ಕೆ ಪೆಟ್ಟಾಗಿ, ರಕ್ತಸ್ರಾವವಾಗಿತ್ತು.

Baburao Chinchansur 1

ಈ ಹಿನ್ನೆಲೆ ಕಳೆದ 2 ದಿನಗಳಿಂದ ಚಿಂಚನಸೂರ್ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಎದುರಾಳಿ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಸೋಲಿಲ್ಲದ ಸರದಾರ ಡಿಕೆಶಿಗೆ ಸಾಮ್ರಾಟ್ ಸವಾಲ್..!

ಗುರುಮಠಕಲ್ ಬಿಜೆಪಿ ಅಭ್ಯರ್ಥಿ ಲಲಿತಾ ಅನಪೂರ, ಬಿಜೆಪಿ ಅಭ್ಯರ್ಥಿ ಶರಣಗೌಡ ಕಂದಕೂರು, ಕಾಡಾ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಗಿರೀಶ್ ಮಟ್ಟಣ್ಣನವರ ಆಸ್ಪತ್ರೆಗೆ ಹೋಗಿ ಚಿಂಚನಸೂರ್ ಹಾಗೂ ಅವರ ಪತ್ನಿ ಅಮರೇಶ್ವರಿ ಚಿಂಚನಸೂರ್ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಕಣ್ಣೀರು

Share This Article