ಚಾಮರಾಜನಗರ: ಬಿಜೆಪಿ, ಜೆಡಿಎಸ್ನಿಂದ ಕಾಂಗ್ರೆಸ್ಗೆ ಸಾಕಷ್ಟು ಜನ ಶಾಸಕರು ಬರಲಿದ್ದಾರೆ, ಅವರ ಸೇರ್ಪಡೆಗೆ ಸಮಯ ನಿಗದಿಯಾಗಿಲ್ಲ ರಾಜ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ಸಾಕಷ್ಟು ಬದಲಾವಣೆಗಳಾಗಲಿವೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಕಾಂಗ್ರೆಸ್ ಪರ್ವ ಆರಂಭವಾಗಿದೆ, ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಇದರ ಮುನ್ಸೂಚನೆ ಸಿಕ್ಕಿದ್ದು ಬೇರೆ ಬೇರೆ ಪಕ್ಷಗಳ ಸಾಕಷ್ಟು ಮಂದಿ ನಾಯಕರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯಗಳಲ್ಲಿ ಹಿಜಬ್ ವಿವಾದ – ಹೈಕೋರ್ಟ್ಗಳ ತೀರ್ಪುಗಳೇನು? ಇಲ್ಲಿದೆ ಮಾಹಿತಿ
ಇದೀಗ ಮಂಡ್ಯದಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಮಂಡ್ಯ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಸೋತು ಶಕ್ತಿಯೇ ಇಲ್ಲವಾಗಿದ್ದ ಕಾಂಗ್ರೆಸ್ ಈಗ ವಿಧಾನಪರಿಷತ್ ಚುನಾವಣೆಯಲ್ಲಿ ಗೆದ್ದಿದ್ದು ಬದಲಾವಣೆ ಮುನ್ಸೂಚನೆಯಾಗಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಾಜಧಾನಿಗೂ ಕಾಲಿಟ್ಟ ಹಿಜಬ್ ವಿವಾದ – ಹಿಜಬ್ ತೆಗೆಯುವಂತೆ ಮಕ್ಕಳಿಗೆ ಶಿಕ್ಷಕರಿಂದ ಒತ್ತಾಯ