– ಇದು ವಿಷಕಾರುವ ಸರ್ಕಾರವೆಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ
– ಸದನದಲ್ಲೇ ಬಾವಿಗಿಳಿದು ಬಿಜೆಪಿ ಧರಣಿ
ಬೆಂಗಳೂರು: ಭಾರೀ ವಿರೋಧದ ನಡುವೆಯೂ ಗುರುವಾರ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರ, ಕೇಂದ್ರ ಸರ್ಕಾರದ ವಿರುದ್ಧ ಎರಡು ನಿರ್ಣಯ ಮಂಡಿಸಿತು.
ಕೇಂದ್ರ ಸರ್ಕಾರ ಆರ್ಥಿಕ ಸಂಪನ್ಮೂಲಗಳ ಸಮಾನ ಹಂಚಿಕೆ ಮತ್ತು ತಾರತಮ್ಯ ರಹಿತ ಆರ್ಥಿಕ ಸಂಪನ್ಮೂಲಗಳ ಹಂಚಿಕೆಯ ನಿಲುವು ತೆಗೆದುಕೊಳ್ಳಬೇಕು. ಎಂ.ಎಸ್ ಸ್ವಾಮಿನಾಥನ್ ವರದಿಯ ಶಿಫಾರಸುಗಳು ಜಾರಿ ಆಗಬೇಕು. ರೈತರ (Farmers) ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಲು ಶಾಸನ ರೂಪಿಸಬೇಕು ಎಂಬ ನಿರ್ಣಯವನ್ನು ಸದನದಲ್ಲಿ ಅಂಗೀಕರಿಸಲಾಯಿತು. ಇದನ್ನೂ ಓದಿ: 40,000 ರೈಲು ಬೋಗಿಗಳಿಗೆ ಸಿಗಲಿದೆ ವಂದೇ ಭಾರತ್‌ನಂತೆ ಹೈಟೆಕ್ ಸ್ಪರ್ಶ – ಏನೆಲ್ಲಾ ವಿಶೇಷತೆ ಇರಲಿದೆ?
Advertisement
Advertisement
ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil) ಬಿಜೆಪಿ ಶಾಸಕರ ವಿರೋಧದ ನಡುವೆಯೂ ನಿರ್ಣಯ ಪ್ರತಿ ಓದಿದರು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 68,200 ಕೋಟಿ ರೂ. ತೆರಿಗೆ ನಷ್ಟ ಆಗಿದೆ ಎಂದು ಆರೋಪಿಸಿದರು. ಜೊತೆಗೆ ಕೇಂದ್ರದಿಂದ ಬರಬೇಕಾದ ಅನುದಾನ ತೆರಿಗೆ ಪಾಲು ಹಾಗೂ ಬರದ ಅಂಕಿ ಅಂಶ ಕುರಿತು ನಿರ್ಣಯ ಮಂಡಿಸಿದರು. ಕರ್ನಾಟಕಕ್ಕೆ ಅನ್ಯಾಯ ಆಗಿದೆ. ನಮ್ಮ ಹಕ್ಕು ಕಸಿದುಕೊಳ್ಳಲಾಗಿದೆ, ಈ ನಿರ್ಣಯವನ್ನು ಸದನ ಸರ್ವಾನುಮತದಿಂದ ಒಪ್ಪಬೇಕು ಎಂದು ಮನವಿ ಮಾಡಿದರು.
Advertisement
ನಿರ್ಣಯ ಮಂಡಿಸುತ್ತಿದ್ದಂತೆ ಬಿಜೆಪಿ ಶಾಸಕರು (BJP MPLs) ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಇದು ವಿಷ ಕಾರುವ ಸರ್ಕಾರ ಕೇಂದ್ರದ ವಿರುದ್ಧ ಪದೇ ಪದೇ ವಿಷ ಕಾರುವ ಸರ್ಕಾರ. ಕೇಂದ್ರ ಸರ್ಕಾರವನ್ನು ಬೈಯುವ ಸರ್ಕಾರ, ಇಂತಹ ಸರ್ಕಾರದ ವಿರುದ್ಧ ನಮ್ಮ ಧಿಕ್ಕಾರ ಧಿಕ್ಕಾರ ಎಂದು ಕೂಗಿ ಗದ್ದಲ ಎಬ್ಬಿಸಿದರು. ಸರ್ಕಾರದ ನಿರ್ಣಯ ಖಂಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು.
Advertisement
ತೀವ್ರ ವಿರೋಧದ ನಡುವೆಯೂ ಕೇಂದ್ರ ಸರ್ಕಾರದ ವಿರುದ್ಧ ನಿರ್ಣಯ ಅಂಗೀಕರಿಸಲಾಯಿತು. ಇದೇ ವೇಳೆ ಶಾಸಕ ಪ್ರಕಾಶ್ ಕೋಳಿವಾಡ್ ಕರ್ನಾಟಕದಲ್ಲಿ ಮೋಡ ಬಿತ್ತನೆ ಕುರಿತು ಖಾಸಗಿ ವಿಧೇಯಕ ಮಂಡಿಸಿದರು. ಇದನ್ನೂ ಓದಿ: Loksabha Election 2024: ದೆಹಲಿಯಲ್ಲಿ ಕೈಗೆ 3 ಸ್ಥಾನ ಬಿಟ್ಟು ಕೊಟ್ಟು 4 ಸ್ಥಾನಗಳಲ್ಲಿ AAP ಸ್ಪರ್ಧೆ?
ನಿರ್ಣಯ: 1 ಅನುದಾನ ತಾರತಮ್ಯ ವಿರುದ್ಧ
ಕರ್ನಾಟಕದ ಅಭಿವೃದ್ಧಿ ವಿಷಯಕ್ಕೆ ಸಂಬಂಧಿಸದಂತೆ, ನಾಗರಿಕರ ಹಿತರಕ್ಷಣೆಯಲ್ಲಿ ಸಮಾನ ಹಂಚಿಕೆಯ ಮತ್ತು ತಾರತಮ್ಯ ರಹಿತ ಆರ್ಥಿಕ ಸಂಪನ್ಮೂಲಗಳ ಹಂಚಿಕೆಯ ನಿಲುವುಗಳನ್ನು ತೆಗೆದುಕೊಳ್ಳಬೇಕು ಮತ್ತು ಕರ್ನಾಟಕದ ಜನತೆಯ ಹಿತರಕ್ಷಣೆಯ ವಿಷಯದಲ್ಲಿ ಯಾವುದೇ ಅನ್ಯಾಯವಾಗಬಾರದು.
ನಿರ್ಣಯ: 2 ರೈತರಿಗೆ ಬೆಂಬಲ ಬೆಲೆ ಕುರಿತ ನಿರ್ಣಯ
ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಸರ್ಕಾರ ಶಾಸನ ರೂಪಿಸಬೇಕು. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕು. ಇದನ್ನೂ ಓದಿ: ಚುನಾವಣೆ ಸ್ಪರ್ಧೆ ಕಾರಣಕ್ಕೆ ಪಕ್ಷಾಂತರ ಮಾಡಿರೋದು ಬೇಸರವಾಗಿದೆ: ಮುದ್ದಹನುಮೇಗೌಡ