– ಫಸ್ಟ್ ಲಿಸ್ಟ್‌ನಲ್ಲಿ ಮೋದಿ, 34 ಸಚಿವರ ಹೆಸರು
ನವದೆಹಲಿ: ಲೋಕಸಭಾ ಚುನಾವಣೆ 2024 ಕ್ಕೆ (General Elections 2024) ಬಿಜೆಪಿ (BJP) ಸಜ್ಜಾಗಿದೆ. ನಿರೀಕ್ಷೆಯಂತೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು (ಶನಿವಾರ) ಬಿಡುಗಡೆ ಮಾಡಿದೆ.
Advertisement
16 ರಾಜ್ಯ ಹಾಗೂ 2 ಕೇಂದ್ರಾಡಳಿತ ಪ್ರದೇಶಗಳಿಂದ 195 ಸೀಟುಗಳಿಗೆ ಹೆಸರು ಪ್ರಕಟಿಸಿದೆ. ಪ್ರಧಾನಿ ಮೋದಿ ಸೇರಿದಂತೆ 34 ಸಚಿವರು ಕಣದಲ್ಲಿದ್ದಾರೆ. ಇದನ್ನೂ ಓದಿ: ಬಹಳ ವರ್ಷಗಳ ನಂತರ ಯಡಿಯೂರಪ್ಪ ಭೇಟಿಯಾದ ಸೋಮಣ್ಣ
Advertisement
Advertisement
ಉತ್ತರ ಪ್ರದೇಶದಿಂದ 51, ಪಶ್ಚಿಮ ಬಂಗಾಳದಿಂದ 20, ಮಧ್ಯಪ್ರದೇಶದಿಂದ 24, ಗುಜರಾತ್ ಮತ್ತು ರಾಜಸ್ಥಾನದಿಂದ ತಲಾ 15, ಕೇರಳದಿಂದ 12, ತೆಲಂಗಾಣದಿಂದ 9, ಅಸ್ಸಾಂನಿಂದ 11, ಜಾರ್ಖಂಡ್ ಮತ್ತು ಛತ್ತೀಸ್‌ಗಢದಿಂದ ತಲಾ 11, ದೆಹಲಿಯಿಂದ 5, ಜಮ್ಮು ಮತ್ತು ಕಾಶ್ಮೀರದಿಂದ 2, ಉತ್ತರಾಖಂಡದಿಂದ 3, ಅರುಣಾಚಲ ಪ್ರದೇಶದಿಂದ 2 ಮತ್ತು ಗೋವಾ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ದಮನ್ ಮತ್ತು ದಿಯುನಿಂದ ತಲಾ 1 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಿಸಿದೆ.
Advertisement
ಮುಂಬರುವ ಲೋಕಸಭೆ ಚುನಾವಣೆಯಲ್ಲಿ 370 ಸೀಟುಗಳನ್ನು ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ. 195 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಮೂರನೇ ಬಾರಿಗೆ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: ಇಂದು ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್?
34 ಸಚಿವರು ಮತ್ತು ಇಬ್ಬರು ಮಾಜಿ ಮುಖ್ಯಮಂತ್ರಿಗಳು ಪಟ್ಟಿಯಲ್ಲಿದ್ದಾರೆ. ಇದರಲ್ಲಿ 28 ಮಹಿಳೆಯರು, 50 ವರ್ಷದೊಳಗಿನ 47 ನಾಯಕರು ಮತ್ತು ಒಬಿಸಿ ಸಮುದಾಯದ 57 ಸದಸ್ಯರಿದ್ದಾರೆ. 195 ಅಭ್ಯರ್ಥಿಗಳ ಪೈಕಿ 51 ಹುರಿಯಾಳುಗಳು ಪ್ರಮುಖ ರಾಜ್ಯ ಉತ್ತರ ಪ್ರದೇಶದಿಂದ, 20 ಮಂದಿ ಪಶ್ಚಿಮ ಬಂಗಾಳದಿಂದ ಮತ್ತು ದೆಹಲಿಯಿಂದ ಐವರು ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ.